AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS ಬಳಿ ಭಾರಿ ಹೈಡ್ರಾಮಾ: ಡ್ಯಾಂ ಮುತ್ತಿಗೆಗೆ ಯತ್ನಿಸಿದ ಬಿಜೆಪಿಗರು ಪೊಲೀಸ್​​ ವಶಕ್ಕೆ

KRS ಬಳಿ ಭಾರಿ ಹೈಡ್ರಾಮಾ: ಡ್ಯಾಂ ಮುತ್ತಿಗೆಗೆ ಯತ್ನಿಸಿದ ಬಿಜೆಪಿಗರು ಪೊಲೀಸ್​​ ವಶಕ್ಕೆ

ಕಿರಣ್​ ಹನಿಯಡ್ಕ
| Edited By: |

Updated on: Jul 31, 2026 | 2:17 PM

Share

ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯದ ಕೆಆರ್‌ಎಸ್ ಡ್ಯಾಂ ಬಳಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಬರ ಪರಿಸ್ಥಿತಿ ನಡುವೆಯೂ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಮಾಜಿ ಸಿಎಂ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಸುಮಲತಾ ಸೇರಿದಂತೆ ಹಲವು ಭಾಗಿಯಾಗಿದ್ದರು. ಜಲಾಶಯಕ್ಕೆ ಮುತ್ತಿಗೆ ಯತ್ನ ನಡೆಸಿದ ಕಾರಣ ಪೊಲೀಸರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದಿದ್ದಾರೆ.

ಮಂಡ್ಯ, ಜುಲೈ 31: ತಮಿಳುನಾಡಿಗೆ ನೀರು ಹರಿಸುವಂತೆ CWMA ಆದೇಶ ಖಂಡಿಸಿ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಎಲ್ಲರನ್ನೂ ವಾಹನದಲ್ಲಿ ತುಂಬಿಸಿ ಕರೆದೊಯ್ದಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ವಿಪಕ್ಷ ನಾಯಕ ಆರ್​.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ​ಸೇರಿ ಪ್ರಮುಖರು ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us