ಕಾವೇರಿ ಕಿಚ್ಚು; ತಮಿಳುನಾಡಿನಲ್ಲಿ ಸಿದ್ದರಾಮಯ್ಯಗೆ ಶ್ರದ್ದಾಂಜಲಿ, ರಾಮನಗರದಲ್ಲಿ ಸ್ಟಾಲಿನ್​ಗೆ ತಿಥಿ

ತಮಿಳುನಾಡಿನಲ್ಲೂ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ನಡೆಯುತ್ತಿವೆ. ತಮಿಳುನಾಡಿನ ತಿರುಚ್ಚಿನಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ತಮಿಳಿಗರು ಆಕ್ರೋಶ ಹೊರ ಹಾಕಿದ್ದು ಕರ್ನಾಟಕದ ರಾಮನಗರದಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್​ಗೆ ತಿಥಿ ಮಾಡಲಾಗಿದೆ. ತಿರುಚನಾಪಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವ ಚಿತ್ರಕ್ಕೆ ಹೂ ಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕಾವೇರಿ ಕಿಚ್ಚು; ತಮಿಳುನಾಡಿನಲ್ಲಿ ಸಿದ್ದರಾಮಯ್ಯಗೆ ಶ್ರದ್ದಾಂಜಲಿ, ರಾಮನಗರದಲ್ಲಿ ಸ್ಟಾಲಿನ್​ಗೆ ತಿಥಿ
| Updated By: ಆಯೇಷಾ ಬಾನು

Updated on: Sep 26, 2023 | 2:27 PM

ಕರ್ನಾಟಕ ರಾಜ್ಯದಲ್ಲಿ ಕಾವೇರಿ ಕಿಚ್ಚು ಜೋರಾಗಿದೆ (Cauvery Water Dispute). ತಮಿಳುನಾಡಿಗೆ ಕರ್ನಾಟಕ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ಬಂದ್ (Bengaluru Bandh) ಮಾಡಿ ರಾಜ್ಯದೆಲ್ಲೆಡೆ ರೈತರು, ಹಲವು ಸಂಘಟನೆಗಳು ಆಕ್ರೋಶ ಹೊರ ಹಾಕುತ್ತಿವೆ. ಇದರ ನಡುವೆ ತಮಿಳುನಾಡಿನಲ್ಲೂ ಕಾವೇರಿ ನೀರಿಗಾಗಿ ಪ್ರತಿಭಟನೆಗಳು ನಡೆಯುತ್ತಿವೆ. ತಮಿಳುನಾಡಿನ ತಿರುಚ್ಚಿನಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ತಮಿಳಿಗರು ಆಕ್ರೋಶ ಹೊರ ಹಾಕಿದ್ದು ಕರ್ನಾಟಕದ ರಾಮನಗರದಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್​ಗೆ (MK Stalin) ತಿಥಿ ಮಾಡಲಾಗಿದೆ.

ತಿರುಚನಾಪಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವ ಚಿತ್ರಕ್ಕೆ ಹೂ ಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕರ್ನಾಟಕದಿಂದ ತಮಿಳುನಾಡಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಯ್ಯಯ್ಯೋ ಅನ್ಯಾಯ ಎಂದು ಘೋಷಣೆ ಕೂಗಿ ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೂಡಲೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಮತ್ತೊಂದೆಡೆ ರಾಮನಗರದ ಐಜೂರು ಸರ್ಕಲ್ ಬಳಿ ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಧರಣಿ ನಡೆಸಲಾಗಿದೆ. ದೇಶದ ಪಾಲಿಗೆ ಸ್ಟಾಲಿನ್ ಸತ್ತೋದ ಎಂದು ಊದಿನ ಕಡ್ಡಿ ಹಚ್ಚಿ, ಭಾವ ಚಿತ್ರಕ್ಕೆ ಹೂವಿನ ಹಾರ ಹಾಕಿ ಮೌನಾಚರಣೆ ಮಾಡಿ ಸ್ಟಾಲಿನ್‌ ಮತ್ತೆ ಹುಟ್ಟಿ ಬರಬೇಡ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ. ಕಾವೇರಿ ವಿಚಾರವಾಗಿ ತಮಿಳುನಾಡು ನಡೆದುಕೊಂಡ ರೀತಿಗೆ ಜಯ ಕರ್ನಾಟಕ ಸಂಘಟನೆ ವಿರೋಧ ಹೊರ ಹಾಕಿದೆ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​