Cauvery Water Dispute: ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ‌ ಕಾವೇರಿ‌ ನದಿಗೆ ಇಳಿದು ರೈತರ ಪ್ರತಿಭಟನೆ

| Updated By: ಆಯೇಷಾ ಬಾನು

Updated on: Aug 23, 2023 | 1:19 PM

ಮಂಡ್ಯ ಜಿಲ್ಲೆ ಶ್ರೀರಂಗಪಟ್ಣಣ ತಾಲೂಕಿನ ಕೆಆರ್​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇವತ್ತು ಅನ್ನದಾತರು ಕಾವೇರಿ ನೀರಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ‌ ಕಾವೇರಿ‌ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯ, ಆ.23: ರಾಜ್ಯದ ಜೀವನಾಡಿ ಕೆಆರ್​ಎಸ್ ಜಲಾಶಯ ಭರ್ತಿಯಾಗಿಲ್ಲ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೇ ತಮಿಳುನಾಡಿಗೆ ನೀರನ್ನ ಹರಿಸಲಾಗುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿಯೇ ಇವತ್ತು ಅನ್ನದಾತರು ಕಾವೇರಿ ನೀರಿಗೆ ಇಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ‌ ಕಾವೇರಿ‌ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.

ಸಕ್ಕರಿನಗರಿ ಮಂಡ್ಯದಲ್ಲಿ ಕಾವೇರಿ ಕಿಚ್ಚು ಹಾರುವ ಲಕ್ಷಣಗಳು ಕಾಣುತ್ತಿಲ್ಲ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಣಣ ತಾಲೂಕಿನ ಕೆಆರ್​ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ನಿನ್ನೆ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಪ್ರತಿಭಟನೆ ವೇಳೆ ಮಂಡ್ಯದಲ್ಲಿ ದೊಡ್ಡ ಹೈಡ್ರಾಮವೇ ನಡೆದಿತ್ತು. ರೈತಸಂಘ ಮೂಲ ಸಂಘಟನೆಯ ಕಾರ್ಯಕರ್ತರು ನೂತನ ದಶಪಥ ಹೆದ್ದಾರಿ ತಡೆದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ರು.