Cauvery Water Dispute: ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?

Edited By:

Updated on: Aug 19, 2026 | 12:14 PM

ಕಾವೇರಿ ಜಲ ವಿವಾದ: ಕರ್ನಾಟಕ ರಾಜ್ಯದಲ್ಲಿ ಬರಗಾಲವಿದ್ದರೂ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ನಾಲೆ ನೀರು ಸ್ಥಗಿತಗೊಳಿಸಿ, ನದಿಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿಸುತ್ತಿದ್ದು, ಸರ್ಕಾರದ ವಿರುದ್ಧ ರೈತರು ಮತ್ತು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಮಂಡ್ಯ, ಆಗಸ್ಟ್ 19: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಹೇಳುತ್ತಿದ್ದರೂ, ವಾಸ್ತವ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಕೆಆರ್‌ಎಸ್‌ ಜಲಾಶಯದಿಂದ ನಾಲೆಗಳಿಗೆ ನೀರು ಸ್ಥಗಿತಗೊಳಿಸಿ, ನದಿಗೆ ಮಾತ್ರವೇ ಸುಮಾರು 2,300 ಕ್ಯೂಸೆಕ್ಸ್‌ ನೀರನ್ನು ಹರಿಸಲಾಗುತ್ತಿದೆ.

ಕರ್ನಾಟಕ ರಾಜ್ಯದಲ್ಲಿ ಬರಗಾಲದ ಸ್ಥಿತಿ ಇರುವುದರಿಂದ ಮತ್ತು ಕಾವೇರಿ ಕೊಳ್ಳದ ಜಲಾಶಯಗಳು ಪೂರ್ಣವಾಗಿ ಭರ್ತಿಯಾಗದ ಕಾರಣ ತಮಿಳುನಾಡಿಗೆ ನೀರು ಬಿಡಲಾಗುವುದಿಲ್ಲ ಎಂದು ಡಿಕೆ ಶಿವಕುಮಾರ್​ ಸರ್ಕಾರ ಪದೇ ಪದೇ ಹೇಳುತ್ತಾ ಬಂದಿದೆ. ಆದರೆ, ಪ್ರತ್ಯಕ್ಷ ದೃಶ್ಯಗಳ ಪ್ರಕಾರ, ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದು ಸ್ಪಷ್ಟವಾಗಿದೆ. ಕಬಿನಿ ಜಲಾಶಯದಿಂದ 12,000 ಕ್ಯೂಸೆಕ್ಸ್‌ ನೀರು ಬಿಡಲಾಗುತ್ತಿದ್ದು, ಕೆಆರ್‌ಎಸ್‌ ನಿಂದ 2,000 ಕ್ಯೂಸೆಕ್ಸ್‌ಗಿಂತಲೂ ಹೆಚ್ಚು ನೀರು ಹರಿದು ಹೋಗುತ್ತಿದೆ.

ಈ ಮೂಲಕ ಕರ್ನಾಟಕ ರಾಜ್ಯ ಸರ್ಕಾರ ರೈತರನ್ನು ದಿಕ್ಕು ತಪ್ಪಿಸುತ್ತಿದೆ ಮತ್ತು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂಬ ಆರೋಪಗಳು ಬಲವಾಗಿ ಕೇಳಿಬರುತ್ತಿವೆ. ಸುಪ್ರೀಂ ಕೋರ್ಟ್‌ ಅಥವಾ CWMA ಆದೇಶಗಳನ್ನು ಪಾಲಿಸುವುದಿಲ್ಲ ಎಂದು ಹೇಳಿದರೂ ಸಹ, ವಾಸ್ತವದಲ್ಲಿ ನೀರು ಹರಿಯುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 19, 2026 12:01 PM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More