Live: ಕಾವೇರಿ ಕಿಚ್ಚು; CWRC, CWMA ಆದೇಶ ಖಂಡಿಸಿ ಕರ್ನಾಟಕ ಬಂದ್
Karnataka Bandh: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ನೇತೃತ್ವದ 'ಕನ್ನಡ ಸಂಘಟನೆಗಳ ಒಕ್ಕೂಟ' ಇಂದು (ಆಗಸ್ಟ್ 13) ಕರ್ನಾಟಕ ಬಂದ್‌ಗೆ ಕರೆ ನೀಡಿದ್ದರೂ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಜನಜೀವನ ಸಂಪೂರ್ಣ ಸಹಜವಾಗಿದ್ದು, ಶಾಲಾ-ಕಾಲೇಜುಗಳು, ವ್ಯಾಪಾರ-ವಹಿವಾಟು ಹಾಗೂ ವಾಹನ ಸಂಚಾರ ಎಂದಿನಂತೆ ಮುಂದುವರಿದಿದೆ.
ಬೆಂಗಳೂರು, ಆಗಸ್ಟ್ 13: ಕಾವೇರಿ ಜಲ ವಿವಾದ ಸಂಬಂಧ ಇಂದು ಕರ್ನಾಟಕ ಬಂದ್‌ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದೆ. ರಾಜ್ಯದ ಕೆಲ ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆಗಳು ಆರಂಭವಾಗಿರುವ ಹೊರತಾಗಿಯೂ, ಜನ ಜೀವನ ಮತ್ತು ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಶಾಲಾ-ಕಾಲೇಜುಗಳು, ಅಂಗಡಿ ಮುಂಗಟ್ಟುಗಳು, ಆಸ್ಪತ್ರೆ, ಹೋಟೆಲ್ಗಳು ಸೇರಿ ಎಲ್ಲವೂ ಓವಪ್ ಆಗಿವೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಎಚ್ಚರಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 13, 2026 08:11 AM
Follow Us

