ಕಾವೇರಿ ನೀರು ಹಂಚಿಕೆ ವಿವಾದ: ರೈತರ ಪ್ರತಿಭಟನೆ ತೀವ್ರ, ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ

Updated on: Jul 29, 2026 | 12:10 PM

ಕಾವೇರಿ ನೀರು ಹಂಚಿಕೆ ವಿವಾದದ ಕುರಿತು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳೊಂದಿಗೆ ತುರ್ತು ಸಭೆ ಕರೆದಿದ್ದಾರೆ. ರೈತರ ಪ್ರತಿಭಟನೆ ಮತ್ತು ಸರ್ಕಾರಿ ವಾದದ ಕುರಿತ ಟೀಕೆಗಳ ನಡುವೆ ಈ ಸಭೆ ಮಹತ್ವ ಪಡೆದಿದೆ. ಇನ್ನೊಂದೆಡೆ, ಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಬೆಂಗಳೂರು, ಜುಲೈ 29: ಕಾವೇರಿ ನೀರು ಹಂಚಿಕೆ ವಿವಾದ ತೀವ್ರಗೊಂಡಿದ್ದು, ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ತುರ್ತು ಸಭೆ ಕರೆದಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಿರುವ ಸಚಿವರು, ಕಾವೇರಿ ವಿಚಾರದಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ. ಇದೇ ವೇಳೆ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಾವೇರಿ ಕಾನೂನು ಹೋರಾಟದ ಸಂಬಂಧ ದೆಹಲಿಯಲ್ಲಿ ವಕೀಲರೊಂದಿಗೆ ಸಭೆ ನಡೆಸಲಿದ್ದಾರೆ. ಹಿರಿಯ ನ್ಯಾಯವಾದಿ ಮೋಹನ್ ಕಾತರಕಿ ಸೇರಿದಂತೆ ತಜ್ಞರೊಂದಿಗೆ ಅವರು ಮಾತುಕತೆ ನಡೆಸುವ ಸಾಧ್ಯತೆ ಇದೆ.

ಸದ್ಯ, ಸರ್ಕಾರ ಕಾವೇರಿ ವಿವಾದದ ಕುರಿತು ಸರಿಯಾಗಿ ವಾದ ಮಂಡಿಸುತ್ತಿಲ್ಲ ಎಂಬ ಆರೋಪ ವಿರೋಧ ಪಕ್ಷದ ಶಾಸಕರಿಂದ, ದರ್ಶನ್ ಪುಟ್ಟಣಯ್ಯ ಅವರಂತಹ ಮುಖಂಡರಿಂದ ಕೇಳಿಬಂದಿದೆ. ವಾಸ್ತವ ಸ್ಥಿತಿಯನ್ನು ಆಯೋಗ ಅಥವಾ ಮಂಡಳಿಗೆ ಸಮರ್ಥವಾಗಿ ತೆರೆದಿಡಬೇಕು ಎಂದು ಈ ನಾಯಕರು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಸಭೆ ಮಹತ್ವ ಪಡೆದುಕೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More