ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು: ಮಂಡ್ಯದಲ್ಲಿ ಭುಗಿಲೆದ್ದ ರೈತರ ಪ್ರತಿಭಟನೆ

Edited By:

Updated on: Aug 11, 2026 | 3:54 PM

ಕಾವೇರಿ ನೀರು ವಿವಾದ ತಾರಕಕ್ಕೇರಿದೆ. ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ CWRC ಶಿಫಾರಸು ಮಾಡಿದ್ದು, ಮಂಡ್ಯ ಮತ್ತು ಮೈಸೂರು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆಗಳು ತೀವ್ರಗೊಂಡಿವೆ. ಈ ನಿರ್ಧಾರವನ್ನು ರೈತರು ಮರಣ ಶಾಸನ ಎಂದು ಕರೆದಿದ್ದಾರೆ.

ಮಂಡ್ಯ, ಆಗಸ್ಟ್​​ 11: ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು ಹಿನ್ನೆಲೆ ಮಂಡ್ಯದಲ್ಲಿ ರೈತರು ಸಿಡಿದೆದ್ದಿದ್ದು, ಈ ಶಿಫಾರಸು ಮರಣ ಶಾಸನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಳಿವಳಿಕೆ ಇಲ್ಲದವರು ಮಾಡುವಂತೆ ಆದೇಶ ಮಾಡಿರುವ ಕಾರಣ CWMAನವರು CWRC ಶಿಫಾರಸನ್ನು ಅಮಾನತ್ತಿನಲ್ಲಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೇ ರಾಜ್ಯದ ಜನರು ಏನು ಮಾಡಬೇಕು? ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದೆ, ರಾಜ್ಯದ ರೈತರ ಹಿತವನ್ನು ಸಿಎಂ ಡಿಕೆಶಿಯವರು​ ಕಾಪಾಡಬೇಕು ಎಂದು ಆಗ್ರಹಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತರು ಪ್ರತಿಭಟನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 11, 2026 03:52 PM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More