ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

Updated on: Aug 10, 2026 | 4:19 PM

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದಂತೆ ತಕ್ಷಣವೇ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು(Tamil Nadu) ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ (ಆ.13) ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿದೆ. ತಮಿಳುನಾಡು ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಅವರು ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುನ್ನೆಲೆಗೆ ತಂದು ತುರ್ತು ವಿಚಾರಣೆಗೆ ಮನವಿ ಮಾಡಿದರು. ಈ ಮನವಿಯನ್ನು ಆಲಿಸಿದ ನ್ಯಾಯಪೀಠವು ಗುರುವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

ನವದೆಹಲಿ, (ಆಗಸ್ಟ್ 10): ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶದಂತೆ ತಕ್ಷಣವೇ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು(Tamil Nadu) ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ (ಆ.13) ನಡೆಸಲು ಸುಪ್ರೀಂ ಕೋರ್ಟ್ (Supreme Court) ಸಮ್ಮತಿಸಿದೆ. ತಮಿಳುನಾಡು ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿ.ಎಸ್. ವೈದ್ಯನಾಥನ್ ಅವರು ವಿಷಯವನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ಪೀಠದ ಮುನ್ನೆಲೆಗೆ ತಂದು ತುರ್ತು ವಿಚಾರಣೆಗೆ ಮನವಿ ಮಾಡಿದರು. ಈ ಮನವಿಯನ್ನು ಆಲಿಸಿದ ನ್ಯಾಯಪೀಠವು ಗುರುವಾರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು.

ಜುಲೈ 30 ರಂದು ನಡೆದ ಸಭೆಯಲ್ಲಿ ದಿನಕ್ಕೆ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶಿಸಿತ್ತು. ಆದ್ರೆ, ಇದಕ್ಕೆ ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಮಳೆ ಇಲ್ಲದ ಕಾರಣ ಕಾವೇರಿ ಜಲಾಶಯದಲ್ಲಿ ನೀರಿಲ್ಲ. ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಆಗಸ್ಟ್ 3 ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More