AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಸಂದಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್: ಆ.3ರಂದು ಕರ್ನಾಟಕ-ತಮಿಳುನಾಡು ಸಿಎಂ ಸಭೆ ನಿಗದಿ

ಕಾವೇರಿ ಸಂದಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್: ಆ.3ರಂದು ಕರ್ನಾಟಕ-ತಮಿಳುನಾಡು ಸಿಎಂ ಸಭೆ ನಿಗದಿ

ಕಿರಣ್​ ಹನಿಯಡ್ಕ
| Edited By: |

Updated on:Jul 28, 2026 | 3:40 PM

Share

ಕಾವೇರಿ ನದಿ ನೀರು ಹಂಚಿಕೆ ವಿವಾದದ ಸ್ವರೂಪ ಪಡೆಯುತ್ತಿರುವ ಮಧ್ಯೆಯೇ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ನೇರ ಮಾತುಕತೆಗೆ ಮುಂದಾಗಿದ್ದಾರೆ. ಹೌದು...ಆಗಸ್ಟ್ 3ರ ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ಧತೆ ನಡೆಯುತ್ತಿವೆ. ಸ್ವಚ್ಛತೆ, ಎಸಿ ಕ್ಲೀನಿಂಗ್, ನೆಲಹಾಸು ಬದಲಾವಣೆ ಸೇರಿದಂತೆಉಭಯ ರಾಜ್ಯಗಳ ಬಾವುಟ ಮತ್ತು ಲಾಂಛನಗಳ ಅಳವಡಿಕೆ ಕಾರ್ಯ ನಡೆದಿದೆ. ಇನ್ನು ಈ ಸಭೆಯಲ್ಲಿ ಎರಡೂ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳು ಸೇರಿ ಒಟ್ಟು 25 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು, (ಜುಲೈ 28): ಕಾವೇರಿ ನದಿ ನೀರು ಹಂಚಿಕೆ ವಿವಾದದ (Cauvery River Water Dispute) ನಡುವೆಯೇ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಬಂಧಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಕಾಣಿಸಿಕೊಂಡಿದೆ. ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಡುವಿನ ಸಂದಾನ ಮಾತುಕತೆಗೆ ವೇದಿಕೆ ಸಿದ್ಧವಾಗಿದೆ. ಮಳೆ ಕೊರತೆಯ ಕಾರಣ ಜಲಾಶಯಗಳಲ್ಲಿನ ನೀರಿನ ಸಂಗ್ರಹ ತಳ ತಲುತ್ತಿದ್ದು, ಕಾವೇರಿ ನದಿ ನೀರು ಹಂಚಿಕೆ ವಿವಾದದ ಸ್ವರೂಪ ಪಡೆಯುತ್ತಿರುವ ಮಧ್ಯೆಯೇ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ನೇರ ಮಾತುಕತೆಗೆ ಮುಂದಾಗಿದ್ದಾರೆ. ಹೌದು…ಆಗಸ್ಟ್ 3ರ ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ಧತೆ ನಡೆಯುತ್ತಿವೆ. ಸ್ವಚ್ಛತೆ, ಎಸಿ ಕ್ಲೀನಿಂಗ್, ನೆಲಹಾಸು ಬದಲಾವಣೆ ಸೇರಿದಂತೆಉಭಯ ರಾಜ್ಯಗಳ ಬಾವುಟ ಮತ್ತು ಲಾಂಛನಗಳ ಅಳವಡಿಕೆ ಕಾರ್ಯ ನಡೆದಿದೆ. ಇನ್ನು ಈ ಸಭೆಯಲ್ಲಿ ಎರಡೂ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳು ಸೇರಿ ಒಟ್ಟು 25 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಬರದ ಮಧ್ಯೆ ಕರ್ನಾಟಕಕ್ಕೆ ಬರಸಿಡಿಲು: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

Published on: Jul 28, 2026 03:37 PM

Follow Us