ಆ.13ರಂದು ಕರ್ನಾಟಕ ಬಂದ್ ದಿನ ಹೋಟೆಲ್ ಓಪನ್-ಕ್ಲೋಸ್ ಬಗ್ಗೆ ಗೌರವ ಅಧ್ಯಕ್ಷ ಹೇಳಿದ್ದಿಷ್ಟು
ಕರ್ನಾಟಕ ಬಂದ್ ಗೆ ಹೋಟೆಲ್ ಸಂಘ ಬೆಂಬಲ ನೀಡುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಈ ಬಗ್ಗೆ ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ಟಿವಿ9 ಜೊತೆ ಮಾತನಾಡಿದ್ದು, ಕರ್ನಾಟಕ ಬಂದ್ಗೆ ಬೆಂಬಲ ನೀಡುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಒಂದು ವಾರ ಇರುವಾಗ ನಾವೆಲ್ಲರೂ ಸೇರಿ ತೀರ್ಮಾನ ಮಾಡುತ್ತೇವೆ. ಹೋಟೆಲ್ ಮಾಲೀಕರು, ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರು, ಬೇಕರಿ ಮಾಲೀಕರ ಜೊತೆಗೆ ಸಭೆ ನಡೆಸುತ್ತೇವೆ. ನಾಡು ನುಡಿ ವಿಚಾರದಲ್ಲಿ ಯಾವಾಗಲೂ ನಮ್ಮ ಬೆಂಬಲ ಇರುತ್ತದೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು, (ಜುಲೈ 31): ಬರಗಾಲದ ಮಧ್ಯೆಯೂ ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವಂತೆ ಆದೇಶಿಸಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕನ್ನಡಪರ ಸಂಘಟನೆಗಳು ಇದೇ ಆಗಸ್ಟ್ 13ರಂದು ಕರ್ನಾಟಕ ಬಂದ್ಗೆ (Karnataka bandh) ಕರೆ ನೀಡಿವೆ. ಇನ್ನು ಕರ್ನಾಟಕ ಬಂದ್ ಗೆ ಹೋಟೆಲ್ ಸಂಘ ಬೆಂಬಲ ನೀಡುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಈ ಬಗ್ಗೆ ಹೋಟೆಲ್ ಮಾಲೀಕರ ಸಂಘದ ಗೌರವಾಧ್ಯಕ್ಷ ಪಿ.ಸಿ.ರಾವ್ ಟಿವಿ9 ಜೊತೆ ಮಾತನಾಡಿದ್ದು, ಕರ್ನಾಟಕ ಬಂದ್ಗೆ ಬೆಂಬಲ ನೀಡುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಒಂದು ವಾರ ಇರುವಾಗ ನಾವೆಲ್ಲರೂ ಸೇರಿ ತೀರ್ಮಾನ ಮಾಡುತ್ತೇವೆ. ಹೋಟೆಲ್ ಮಾಲೀಕರು, ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರು, ಬೇಕರಿ ಮಾಲೀಕರ ಜೊತೆಗೆ ಸಭೆ ನಡೆಸುತ್ತೇವೆ. ನಾಡು ನುಡಿ ವಿಚಾರದಲ್ಲಿ ಯಾವಾಗಲೂ ನಮ್ಮ ಬೆಂಬಲ ಇರುತ್ತದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 31, 2026 05:28 PM
Loading...
Unable to load recommendations.
Follow Us
