
[lazy-load-videos-and-sticky-control id=”ZNk3vG9mZU0″]
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು CCB ಅಧಿಕಾರಿಗಳು ಇಂದು ಸಂಜೆ ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಮೂರನೆಯ ಬಂಧನವಾಗಿದೆ. ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್ಸ್ ಜತೆ ನಂಟು ಆರೋಪದಡಿ ರಾಗಿಣಿ ಬಂಧನ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣದ ಬಳಿಕ ಕಾನೂನು ಪ್ರಕ್ರಿಯೆಗಳು ಏನು..?
ಬಳಿಕ ಪ್ರಕರಣದಲ್ಲಿ ಪ್ರಮುಖ ಪಾತ್ರ ಇರುವ ಕಾರಣ ಹೆಚ್ಚಿನ ವಿಚಾರಣೆಗೆ ಸಿಸಿಬಿ ವಶಕ್ಕೆ ಕೇಳುವ ಸಾಧ್ಯತೆಯಿದೆ. ಸುಮಾರು 7 ರಿಂದ 14 ದಿನ ಸಿಸಿಬಿ ಪೊಲೀಸರ ವಶಕ್ಕೆ ಮನವಿ ಮಾಡಲಿದ್ದಾರೆ. ನ್ಯಾಯಾಧೀಶರು 5 ರಿಂದ 7 ದಿನ ಪೊಲೀಸ್ ಕಸ್ಟಡಿಗೆ ನೀಡಬಹುದು. ಪೊಲೀಸ್ ಕಸ್ಟಡಿಗೆ ಪಡೆದು ಮತ್ತೆ ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.
ಪೊಲೀಸ್ ವಶಕ್ಕೆ ನೀಡಿದರೆ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ವಿಚಾರಣೆ ಮುಂದುವರಿಯಲಿದೆ. ನಂತರ ರಾಗಿಣಿಯನ್ನು ಮಡಿವಾಳದ ರಿಮ್ಯಾಂಡ್ ರೂಂನಲ್ಲಿ ಇರಿಸಲಾಗುವುದು. ಮರುದಿನ ಮತ್ತೆ ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಾಗುವುದು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಬೆಳಗ್ಗೆ ನಟಿಯ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಆಕೆಯ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್, 2 ಮೊಬೈಲ್, ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿತ್ತು. ನಟಿ ರಾಗಿಣಿ ದ್ವಿವೇದಿ ಮೊಬೈಲ್‌ನಲ್ಲಿ ಡ್ರಗ್ಸ್ ಪೆಡ್ಲರ್‌ಗಳು, ಡ್ರಗ್ಸ್ ಪಾರ್ಟಿ ಆಯೋಜಕರ ಸಂಪರ್ಕ ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಜೊತೆಗೆ, ಪಾರ್ಟಿಗಳಲ್ಲೂ ಡ್ರಗ್ಸ್ ಸೇವನೆ ಬಗ್ಗೆ ಸಾಕ್ಷ್ಯಾಧಾರ ಲಭ್ಯವಾಗಿದೆ ಎಂದು ಹೇಳಲಾಗಿದೆ.
Published On - 6:43 pm, Fri, 4 September 20