ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್ಪೆಕ್ಟರ್ ಅರುಣ್ ಸಾಲಂಕೆ ಯಾರು? ಇಲ್ಲಿದೆ ವಿವರ
ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟ್ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪ ಪತನಗೊಂಡಿದ್ದು, ಕರ್ನಾಟಕದ ಐವರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರಿತ್ಯದಿಂದ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಶಂಕರ್ ಗೌಡ, ಕೆ.ಸುಧೀರ್, ಹೆಚ್.ಎಸ್.ನಟರಾಜ್, ಪ್ರತಾಪ್ ಮೃತ ದುರ್ದೈವಿಗಳು.
ಬೆಂಗಳೂರು, ಅಕ್ಟೋಬರ್ 30): ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟ್ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪ ಪತನಗೊಂಡಿದ್ದು, ಕರ್ನಾಟಕದ ಐವರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರಿತ್ಯದಿಂದ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಶಂಕರ್ ಗೌಡ, ಕೆ.ಸುಧೀರ್, ಹೆಚ್.ಎಸ್.ನಟರಾಜ್, ಪ್ರತಾಪ್ ಮೃತ ದುರ್ದೈವಿಗಳು.
ಅರುಣ್ ಸಾಲುಂಕೆ ಯಾರು ?
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅರಟಾಳ ಗ್ರಾಮದ ಅರುಣ್ ಸಾಲಂಕೆ, 2007ನೇ ಬ್ಯಾಚ್ ನ ಅಧಿಕಾರಿಯಾಗಿದ್ದು, ಬೆಂಗಳೂರಿನ ಸಿಸಿಬಿ ಇನ್ಸ್ಪೆಕ್ಟರ್ ಆಗಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಾಸಿಸುತ್ತಿದ್ದರು. ಇಂದಿರಾನಗರ, ಬಾಣಸವಾಡಿ, ಸಿಸಿಬಿ ಸೇರಿದಂತೆ ಹಲವು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ಸಿಸಿಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದರು.

