ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಸಾಲಂಕೆ ಯಾರು? ಇಲ್ಲಿದೆ ವಿವರ

Edited By:

Updated on: Oct 30, 2026 | 7:05 PM

ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟ್ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪ ಪತನಗೊಂಡಿದ್ದು, ಕರ್ನಾಟಕದ ಐವರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರಿತ್ಯದಿಂದ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಸಿಸಿಬಿ ಇನ್ಸ್​​ಪೆಕ್ಟರ್ ಅರುಣ್ ಸಾಲಂಕೆ, ಶಂಕರ್ ಗೌಡ, ಕೆ.ಸುಧೀರ್, ಹೆಚ್​.ಎಸ್.ನಟರಾಜ್, ಪ್ರತಾಪ್​ ಮೃತ ದುರ್ದೈವಿಗಳು.

ಬೆಂಗಳೂರು, ಅಕ್ಟೋಬರ್ 30): ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟ್ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪ ಪತನಗೊಂಡಿದ್ದು, ಕರ್ನಾಟಕದ ಐವರು ಸೇರಿ 6 ಮಂದಿ ಮೃತಪಟ್ಟಿದ್ದಾರೆ. ಹವಾಮಾನ ವೈಪರಿತ್ಯದಿಂದ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಸಿಸಿಬಿ ಇನ್ಸ್​​ಪೆಕ್ಟರ್ ಅರುಣ್ ಸಾಲಂಕೆ, ಶಂಕರ್ ಗೌಡ, ಕೆ.ಸುಧೀರ್, ಹೆಚ್​.ಎಸ್.ನಟರಾಜ್, ಪ್ರತಾಪ್​ ಮೃತ ದುರ್ದೈವಿಗಳು.

ಅರುಣ್ ಸಾಲುಂಕೆ ಯಾರು ?

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅರಟಾಳ ಗ್ರಾಮದ ಅರುಣ್ ಸಾಲಂಕೆ, 2007ನೇ ಬ್ಯಾಚ್ ನ ಅಧಿಕಾರಿಯಾಗಿದ್ದು, ಬೆಂಗಳೂರಿನ ಸಿಸಿಬಿ ಇನ್ಸ್​​ಪೆಕ್ಟರ್ ಆಗಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಾಸಿಸುತ್ತಿದ್ದರು. ಇಂದಿರಾನಗರ, ಬಾಣಸವಾಡಿ, ಸಿಸಿಬಿ ಸೇರಿದಂತೆ ಹಲವು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ಸಿಸಿಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದರು.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಕರ್ನಾಟಕದ ಐವರು ಸೇರಿ 6 ಜನ ಸಾವು

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More