AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಆಪ್ತ ಧನ್ವೀರ್ ಮೇಲೆ ಅನುಮಾನ; ಕರೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ದರ್ಶನ್ ಆಪ್ತ ಧನ್ವೀರ್ ಮೇಲೆ ಅನುಮಾನ; ಕರೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು

ರಾಜೇಶ್ ದುಗ್ಗುಮನೆ
|

Updated on: Nov 10, 2025 | 10:19 AM

Share

ಜೈಲಿನಲ್ಲಿ ರಾಜಾತಿಥ್ಯ ಸಿಗೋ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣದ ಬಗ್ಗೆ ಚರ್ಚೆ ಶುರುವಾಗಿದೆ. ಇದು ಹಳೆಯ ವಿಡಿಯೋ ಎಂದು ಅಧಿಕಾರಿಗಳು ಹೇಳುತ್ತಿದ್ದರಾದರೂ ಅದು ನಿಜವಲ್ಲ. ಈಗ ದರ್ಶನ್ ಆಪ್ತ ಧನ್ವಿರ್​ನ ಕರೆಸಿ ಸಿಸಿಬಿ ವಿಚಾರಣೆ ನಡೆಸಿದೆ. ಆ ಬಗ್ಗೆ ಇಲ್ಲಿದೆ ವಿವರ.

ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ದರ್ಶನ್ ಆಪ್ತ, ನಟ ನಿನ್ನೆ ನಟ ಧನ್ವೀರ್​ನನ್ನು ಕರೆಸಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸದ್ಯ ಜೈಲಿನ ವಿಡಿಯೋನ ದರ್ಶನ್ ಆಪ್ತ ಧನ್ವೀರ್ ರಿಲೀಸ್ ಮಾಡಿರೋ ಅನುಮಾನ ಇದೆ. ಈ ಕಾರಣದಿಂದಲೇ ಧನ್ವೀರ್ ವಿಚಾರಣೆ ನಡೆಸಲಾಗಿದೆ. ಆದರೆ ಅವರ ಬಳಿ ಆ ರೀತಿಯ ಯಾವುದೇ ವಿಡಿಯೋ ಪತ್ತೆ ಆಗಿಲ್ಲ. ಹಾಗಾಗಿ ವಿಚಾರಣೆ ನಡೆಸಿ ಅವರನ್ನು ಸಿಸಿಬಿ ಪೊಲೀಸರು ಕಳುಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.