ಚೈತ್ರಾ ಕುಂದಾಪುರ ಅಸ್ಪತ್ರೆಯಿಂದ ಮಹಿಳಾ ಸಾಂತ್ವನ ಕೇಂದ್ರಕ್ಕೆ; ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ಪುನರಾರಂಭ

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Sep 19, 2023 | 11:08 AM

ನಿನ್ನೆ ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೈತ್ರಾಳನ್ನು ನಗರದ ಮಹಿಳಾ ಸಾಂತ್ವನ ಕೇಂದ್ರವೊಂದಕ್ಕೆ ಕರೆದೊಯ್ಯಲಾಗಿತ್ತು. ಕಳೆದ ಶುಕ್ರವಾರ ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಅಸ್ವಸ್ಥಗೊಂಡವಳಂತೆ ನಟಿಸಿದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಎಲ್ಲ ಪ್ಯಾರಾಮೀಟರ್ಸ್ ನಾರ್ಮಲ್ ಆಗಿ ಕೆಲಸ ಮಾಡುತ್ತಿವೆ ಎಂದು ವೈದ್ಯರು ಹೇಳಿದ್ದರು.

ಬೆಂಗಳೂರು: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ (Govind Babu Pujari) ರೂ. 5 ಕೋಟಿ ವಂಚಿಸಿದ ಅರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರಳ (Chaitra Kundapura) ವಿಚಾರಣೆ ಇಂದು ಮುಂದುವರಿಯಲಿದೆ. ವಿಡಿಯೋದಲ್ಲಿ ಕಾಣುತ್ತಿರುವ ಹಾಗೆ ನಗರದ ಮಹಿಳಾ ಸಾಂತ್ವನ ಕೇಂದ್ರವೊಂದರಿಂದ ಅವಳನ್ನು ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ (CCB Office) ಕರೆತರಲಾಯಿತು. ಕಚೇರಿಗೆ ಬಂದಾಗ ಚೈತ್ರಾ ಮೊದಲಿನ ಹಾಗೆ ಮಾಧ್ಯಮದವರ ಕಡೆ ನೋಡುತ್ತಾ ಪಾಸಿಂಗ್ ಹೇಳಿಕೆ ನೀಡುವ ಸಾಹಸವೇನೂ ಮಾಡಲಿಲ್ಲ. ನಿನ್ನೆ ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಚೈತ್ರಾಳನ್ನು ನಗರದ ಮಹಿಳಾ ಸಾಂತ್ವನ ಕೇಂದ್ರವೊಂದಕ್ಕೆ ಕರೆದೊಯ್ಯಲಾಗಿತ್ತು. ನಿಮಗೆ ಚೆನ್ನಾಗಿ ನೆನಪಿದೆ, ಕಳೆದ ಶುಕ್ರವಾರ ಸಿಸಿಬಿ ವಿಚಾರಣೆ ಸಂದರ್ಭದಲ್ಲಿ ಅಸ್ವಸ್ಥಗೊಂಡವಳಂತೆ ನಟಿಸಿದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಎಲ್ಲ ಪ್ಯಾರಾಮೀಟರ್ಸ್ ನಾರ್ಮಲ್ ಆಗಿ ಕೆಲಸ ಮಾಡುತ್ತಿವೆ ಎಂದು ವೈದ್ಯರು ಹೇಳಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ

Published on: Sep 19, 2023 10:38 AM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.