ಹಾಸನ ಮಹಾನಗರ ಪಾಲಿಕೆ ಅಧಿಕಾರಿಗಳ ನಡುವೆ ‘ಕ್ಯಾಮರಾ’ ವಾರ್: ಕಾರಣ ಇಲ್ಲಿದೆ
ಹಾಸನ ಮಹಾನಗರ ಪಾಲಿಕೆಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ವಿಚಾರದಲ್ಲಿ ಅಧಿಕಾರಿಗಳ ನಡುವೆ ಕಲಹ ನಡೆದಿದೆ. ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಕ್ಯಾಮರಾವನ್ನು ಮ್ಯಾನೇಜರ್ ಪ್ರಕಾಶ್ ತಮ್ಮ ಕಚೇರಿಯಿಂದ ತೆರವುಗೊಳಿಸಿದ್ದಾರೆ. ತಮ್ಮ ಅನುಮತಿ ಇಲ್ಲದೆ ಕ್ಯಾಮರಾ ಹಾಕಿದ್ದಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿರೋದು, ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.
ಹಾಸನ, ಫರಬ್ರವರಿ 25: ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ನಡುವೆ ಕಲಹ ವರದಿಯಾಗಿದೆ. ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ದಾಖಲಾತಿಗಾಗಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾವನ್ನು ಮ್ಯಾನೇಜರ್ ಪ್ರಕಾಶ್ ಸೂಚನೆಯಂತೆ ತೆರವುಗೊಳಿಸಲಾಗಿದೆ. ಬೇರೆ ಯಾವುದೇ ಸಿಬ್ಬಂದಿ, ಶಾಖೆಗೂ ಕ್ಯಾಮರಾ ಅಳವಡಿಸದೆ ತಮ್ಮ ಕಚೇರಿಗೆ ಮಾತ್ರ ಹಾಕಿರುವದಕ್ಕೆ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಮತಿ ಕೇಳದೆ ಕ್ಯಾಮರಾ ಹೇಗೆ ಹಾಕಿದ್ರು ಎಂದು ಪ್ರಶ್ನಿಸಿದ್ದಾರೆ. ಈ ಬೆಳವಣಿಗೆಯು ಹಾಸನ ಮಹಾನಗರ ಪಾಲಿಕೆಯ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
