ಹರ್ಷನ ಮನೆ ಸುತ್ತಮುತ್ತಲಿನ ಸಿಸಿಟಿವಿ ಫುಟೇಜ್ ಪರಿಶೀಲಿಸಲಾಗುತ್ತಿದೆ, ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಲಾಗುವುದು: ಶಿವಮೊಗ್ಗ ಎಸ್ ಪಿ
ಪೊಲೀಸ್ ವರಿಷ್ಠಾಧಿಕಾರಿ ಅವರು ಹರ್ಷನ ಮನೆ ಬಳಿಯಿರುವ ಸಿಸಿಟಿವಿಗಳಿಂದ ಲಭ್ಯವಾಗಿರುವ ಫುಟೇಜ್ ಪರಿಶೀಲಿಸಲಾಗುತ್ತಿದೆ ಮತ್ತು ಕುಟುಂಬಕ್ಕೆ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.
ಶಿವಮೊಗ್ಗ: ಭಜರಂಗ ದಳದ ಕಾರ್ಯಕರ್ತ ಹರ್ಷ (Harsha) ಕೊಲೆ ನಡೆದು 8 ತಿಂಗಳು ಕಳೆದು, ಹಂತಕರನ್ನು ಜೈಲಿಗೆ ಹಾಕಿದರೂ ಹರ್ಷನ ಕುಟುಂಬಸ್ಥರಿಗೆ ಈಗಲೂ ಕೆಲ ಪುಂಡರು ಫೋನ್ ಮಾಡಿ ಬೆದರಿಕೆ ಒಡ್ಡುತ್ತಿದ್ದಾರೆ ಅಂತ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಸುದ್ದಿಗೋಷ್ಟಿಯೊಂದನ್ನು ನಡೆಸಿದ ಶಿವಮೊಗ್ಗೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿಥುನ್ ಕುಮಾರ (GK Mithunkumar) ಅವರು ಹರ್ಷನ ಮನೆ ಬಳಿಯಿರುವ ಸಿಸಿಟಿವಿಗಳಿಂದ ಲಭ್ಯವಾಗಿರುವ ಫುಟೇಜ್ ಪರಿಶೀಲಿಸಲಾಗುತ್ತಿದೆ ಮತ್ತು ಕುಟುಂಬಕ್ಕೆ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು. ಆ ಏರಿಯಾದಲ್ಲಿ ಪೊಲೀಸ್ ಪೆಟ್ರೋಲಿಂಗ್ (police patrolling) ಸಹ ಹೆಚ್ಚಿಸಲಾಗುವುದು ಅಂತ ಎಸ್ ಪಿ ಹೇಳಿದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

