Video: ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ ಯುವಕ

Updated on: Sep 04, 2024 | 3:51 PM

ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯಲ್ಲಿ ಯುವಕರ ಗುಂಪೊಂದು ಚೂಪಾದ ಆಯುಧದಿಂದ ಯುವಕನ ಮೇಲೆ ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಮುಂಬೈ: ಮೊಬೈಲ್ ಕೊಡಲು ನಿರಾಕರಿಸಿದ ವ್ಯಕ್ತಿಯೋರ್ವನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿರುವ ಭೀಕರ ಘಟನೆ ಮುಂಬೈನ ಧಾರಾವಿಯಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಘಟನೆಯಲ್ಲಿ ಯುವಕರ ಗುಂಪೊಂದು ಚೂಪಾದ ಆಯುಧದಿಂದ ಯುವಕನ ಮೇಲೆ ನಿರ್ದಯವಾಗಿ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ವರದಿಗಳ ಪ್ರಕಾರ, ತೀವ್ರವಾಗಿ ಗಾಯಗೊಂಡು ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಮಂಗಳವಾರ ಬೆಳಗ್ಗೆ 9.24ಕ್ಕೆ ಈ ಘಟನೆ ನಡೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published on: Sep 04, 2024 03:46 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More