ಗಂಗಾವತಿಯಲ್ಲಿ ಸೈಕೋ ಕಳ್ಳನ ಹಾವಳಿ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!

Edited By:

Updated on: Mar 30, 2026 | 7:58 AM

ಗಂಗಾವತಿಯ ಸಿಬಿಎಸ್ ಬಡಾವಣೆಯಲ್ಲಿ ವಿಕೃತ ಕಾಮಿ ಕಳ್ಳನೊಬ್ಬನ ಅಟಾಟೋಪ ಶುರುವಾಗಿದ್ದು, ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದಾನೆ. ಈತನ ಕೃತ್ಯದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಕೃತ ಕಾಮಿ ಕಳ್ಳನಿಂದಾಗಿ ಮಹಿಳೆಯರು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಕೊಪ್ಪಳ, ಮಾರ್ಚ್ 30: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ಬಡಾವಣೆಯಲ್ಲಿ ವಿಚಿತ್ರ ಕಳ್ಳನೊಬ್ಬನ ಹಾವಳಿ ಶುರುವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ಮನೆಯ ಗೋಡೆ ಹಾರಿ ಬರುತ್ತಿರುವ ಈ ಖದೀಮ, ಮಹಿಳೆಯರ ಒಳ ಉಡುಪುಗಳನ್ನು ಮಾತ್ರ ಕಳ್ಳತನ ಮಾಡುತ್ತಿದ್ದಾನೆ. ಈತನ ವಿಕೃತ ಚೇಷ್ಟೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯ ಮಹಿಳೆಯರಲ್ಲಿ ಆತಂಕ ಮೂಡಿಸಿದೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More