ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

Edited By:

Updated on: Apr 01, 2026 | 2:49 PM

ಬಂಟ್ವಾಳದ ಸಜಿಪಮುನ್ನೂರು ಗ್ರಾಮದಲ್ಲಿ ರಸ್ತೆ ದಾಟುತ್ತಿದ್ದ ಬೋಳಿಯಾರು ಮೂಲದ ಭಾರತಿ ಎಂಬ ಮಹಿಳೆಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ಹತ್ತಾರು ಅಡಿ ದೂರಕ್ಕೆ ಎತ್ತಿ ಎಸೆಯಲ್ಪಟ್ಟಿದ್ದಾರೆ. ಮಗಳ ಜೊತೆ ದೈವದ ಕಟ್ಟೆಗೆ ಕಾಣಿಕೆ ಸಲ್ಲಿಸಲು ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ.

ಮಂಗಳೂರು, ಏಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನ್ನುವಂತಿದೆ. ನಡೆದಿದ್ದೇನು? ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಿ ರಸ್ತೆಯ ಅಂಚಿಗೆ ತಲುಪುತ್ತಿದ್ದಂತೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಕಾರು ಇವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಭಾರತಿ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More