Ramesh Jarkiholi’ s CD Claims: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ‘ಸಿಡಿ’ಗಳೇ ನಿರ್ಣಾಯಕ ಪಾತ್ರ ವಹಿಸಲಿವೆಯೇ?
ಏತನ್ಮಧ್ಯೆ, ಶಿವಕುಮಾರ್ ತಾನು ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆಲ್ಲಿ ರಾಜ್ಯ ಬಿಜೆಪಿ ಘಟಕಕ್ಕೆ ಸಿಡಿಯೇ ಪ್ರಮುಖ ಅಸ್ತ್ರವಾಗುವ ಲಕ್ಷಣ ಸಷ್ಟವಾಗುತ್ತಿದೆ.
ಬೆಂಗಳೂರು: ಇನ್ನೆರಡು ತಿಂಗಳಲ್ಲಿ ನಡೆಯಲಿರುವ ವಿಧಾನ ಸಭೆ ಚುನಾವಣೆಗಿಂತ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಮಾಡಿರುವ ಅರೋಪಗಳ ಸಿಡಿಯ (CD) ವಿಷಯವೇ ಹೆಚ್ಚು ಚರ್ಚೆಯಾಗುತ್ತಿದೆ. ಶುಕ್ರವಾರದಂದು ರಮೇಶ್ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ವಿನಂತಿ ಮಾಡಿಕೊಂಡಿದ್ದಾರೆ. ಶಾ ಅವರು ಸಿಡಿಗಳನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಮುಂದಿನ ವಾರ ಪುನಃ ದೆಹಲಿಗೆ ಆಗಮಿಸಿ ತಮ್ಮನ್ನು ಕಾಣುವಂತೆಯೂ ರಮೇಶ್ ಗೆ ಗೃಹಸಚಿವ ಹೇಳಿದ್ದಾರಂತೆ. ಏತನ್ಮಧ್ಯೆ, ಶಿವಕುಮಾರ್ ತಾನು ಯಾವುದೇ ತನಿಖೆ ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆಲ್ಲಿ ರಾಜ್ಯ ಬಿಜೆಪಿ ಘಟಕಕ್ಕೆ ಸಿಡಿಯೇ ಪ್ರಮುಖ ಅಸ್ತ್ರವಾಗುವ ಲಕ್ಷಣ ಸಷ್ಟವಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ