IND vs PAK, ICC World Cup: ಜಮ್ಮು-ಕಾಶ್ಮೀರದಲ್ಲಿ ಭಾರತದ ಗೆಲುವನ್ನು ಅದ್ಧೂರಿಯಾಗಿ ಸಂಭ್ರಮಿಸಿದ ಫ್ಯಾನ್ಸ್
India's victory celebration: ಐಸಿಸಿ ಏಕದಿನ ವಿಶ್ವಕಪ್ನ 12ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವನ್ನು ಜಮ್ಮು ಮತ್ತು ಕಾಶ್ಮೀರದ ಅಭಿಮಾನಿಗಳು ಬೀದಿಗಳಲ್ಲಿ ತ್ರಿವರ್ಣವನ್ನು ಹಿಡಿದು ‘ಇಂಡಿಯಾ ಇಂಡಿಯಾ’ ಎಂದು ಕೂಗುತ್ತ ಖುಷಿಯಿಂದ ಸಂಭ್ರಮಿಸಿದ್ದಾರೆ.
ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ನ 12ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ (India vs Pakistan) 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಬದ್ಧವೈರಿಗಳ ಕಾದಾಟದಲ್ಲಿ ಸಂಪೂರ್ಣವಾಗಿ ಮೇಲುಗೈ ಸಾಧಿಸಿದ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತು. ಭಾರತದ ಈ ಗೆಲುವನ್ನು ಇಡೀ ಭಾರತದಲ್ಲಿ ಹಬ್ಬದಂತೆ ಆಚರಿಸಲಾಗುತ್ತಿದೆ. ಅದರಲ್ಲೂ ರೋಹಿತ್ ಪಡೆಯ ಈ ಅಮೋಘ ಗೆಲುವಿನಿಂದ ಹರ್ಷಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಅಭಿಮಾನಿಗಳು ರಸ್ತೆಗೆ ಇಳಿದು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಜಮ್ಮು ಮತ್ತು ಕಾಶ್ಮೀರದ ಅಭಿಮಾನಿಗಳು ಬೀದಿಗಳಲ್ಲಿ ತ್ರಿವರ್ಣವನ್ನು ಹಿಡಿದು ‘ಇಂಡಿಯಾ ಇಂಡಿಯಾ’ ಎಂದು ಕೂಗುತ್ತ ಕುಣಿದು ಕುಪ್ಪಳಿಸಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ.
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

