IND vs PAK, ICC World Cup: ಜಮ್ಮು-ಕಾಶ್ಮೀರದಲ್ಲಿ ಭಾರತದ ಗೆಲುವನ್ನು ಅದ್ಧೂರಿಯಾಗಿ ಸಂಭ್ರಮಿಸಿದ ಫ್ಯಾನ್ಸ್

Updated on: Oct 15, 2023 | 7:27 AM

India's victory celebration: ಐಸಿಸಿ ಏಕದಿನ ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವನ್ನು ಜಮ್ಮು ಮತ್ತು ಕಾಶ್ಮೀರದ ಅಭಿಮಾನಿಗಳು ಬೀದಿಗಳಲ್ಲಿ ತ್ರಿವರ್ಣವನ್ನು ಹಿಡಿದು ‘ಇಂಡಿಯಾ ಇಂಡಿಯಾ’ ಎಂದು ಕೂಗುತ್ತ ಖುಷಿಯಿಂದ ಸಂಭ್ರಮಿಸಿದ್ದಾರೆ.

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ (India vs Pakistan) 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಬದ್ಧವೈರಿಗಳ ಕಾದಾಟದಲ್ಲಿ ಸಂಪೂರ್ಣವಾಗಿ ಮೇಲುಗೈ ಸಾಧಿಸಿದ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತು. ಭಾರತದ ಈ ಗೆಲುವನ್ನು ಇಡೀ ಭಾರತದಲ್ಲಿ ಹಬ್ಬದಂತೆ ಆಚರಿಸಲಾಗುತ್ತಿದೆ. ಅದರಲ್ಲೂ ರೋಹಿತ್ ಪಡೆಯ ಈ ಅಮೋಘ ಗೆಲುವಿನಿಂದ ಹರ್ಷಗೊಂಡಿರುವ ಜಮ್ಮು ಮತ್ತು ಕಾಶ್ಮೀರದ ಅಭಿಮಾನಿಗಳು ರಸ್ತೆಗೆ ಇಳಿದು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಈ ವಿಡಿಯೋದಲ್ಲಿ ಜಮ್ಮು ಮತ್ತು ಕಾಶ್ಮೀರದ ಅಭಿಮಾನಿಗಳು ಬೀದಿಗಳಲ್ಲಿ ತ್ರಿವರ್ಣವನ್ನು ಹಿಡಿದು ‘ಇಂಡಿಯಾ ಇಂಡಿಯಾ’ ಎಂದು ಕೂಗುತ್ತ ಕುಣಿದು ಕುಪ್ಪಳಿಸಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ.

Follow Us
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More