Loading video

ಬೆಳಗಾವಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನಕ್ಕೆ ಮಾಜಿ ಯುಎಸ್ ಅಧ್ಯಕ್ಷ ಬರಾಕ್ ಒಬಾಮಾರಿಗೆ ಆಹ್ವಾನ: ಹೆಚ್​ಕೆ ಪಾಟೀಲ್

|

Updated on: Nov 04, 2024 | 11:59 AM

ಡಿಸೆಂಬರ್ 26 ಮತ್ತು 27 ರಂದು ಬೆಳಗಾವಿಯಲ್ಲಿ ಎಐಸಿಸಿ ಸಭೆ ನಡೆಯಿತು ಮತ್ತು ಆ ದಿನಗಳು ಭಾರತದ ಇತಿಹಾಸದಲ್ಲಿ ಹೆಚ್ಚಿನ ಮಹತ್ವ ಪಡೆದುಕೊಂಡಿವೆ, ಅದೇ ಸಭೆಯಲ್ಲಿ ಗಾಂಧೀಜಿ ಅಸ್ಪೃಶ್ಯತಾ ನಿವಾರಣೆಯ ಘೋಷಣೆ ಮಾಡಿದರು ಮತ್ತು ಮೊಟ್ಟಮೊದಲ ಬಾರಿಗೆ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡನ್ನು ಹಾಡಲಾಯಿತು ಎಂದು ಪಾಟೀಲ್ ಹೇಳಿದರು.

ಗದಗ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ಬೆಳಗಾವಿಯಲ್ಲಿ ನಡೆದ 39ನೇ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸಮಿತಿ ಅಧ್ಯಕ್ಷರಾಗಿ ಭಾಗವಹಿಸಿ ಸ್ವಾತಂತ್ರ್ಯ ಸಂಗ್ರಾಮವನ್ನು ತೀವ್ರಗೊಳಿಸಲು ಕರೆನೀಡಿದ ಸಂದರ್ಭಕ್ಕೆ ಈಗ ನೂರು ವರ್ಷಗಳ ಸಂಭ್ರಮ. ಈ ಪ್ರಯುಕ್ತ ಕರ್ನಾಟಕ ಸರ್ಕಾರ ಒಂದು ವಿಶೇಷ ಜಂಟಿ ಅಧಿವೇಶನವನ್ನು ಬೆಳಗಾವಿಯಲ್ಲಿ ಆಯೋಜಿಸಲು ನಿರ್ಧರಿಸಿದ್ದು ಕಾರ್ಯಕ್ರಮಕ್ಕೆ ಗಾಂಧೀಜಿಯವರ ಅನುಯಾಯಿ ಆಗಿರುವ ಮತ್ತು ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಅಹ್ವಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್ ಕೆ ಪಾಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್