ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣವನ್ನು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರಿನಲ್ಲಿ ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. 89 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ರೈಲು ನಿಲ್ದಾಣ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ರಾಜ್ಯ ಸರ್ಕಾರವು ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ. ಹೊಸ ನಿಲ್ದಾಣ ನಿರ್ಮಾಣವಾದ ನಂತರ ಹೆಸರಿಡಲಾಗುವುದು ಎಂದು ಸಚಿವರು ತಿಳಿಸಿದರು.
ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶೀ ಶಿವಕುಮಾರ ಸ್ವಾಮೀಜಿಯವರ ಹೆಸರು ಇಡಬೇಕು ಎಂಬುವುದು ತುಮಕೂರು ಜನರ ಬಹುದಿನಗಳ ಒತ್ತಾಯವಾಗಿದೆ. ಇದಕ್ಕೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ರೈಲ್ವೇ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
89 ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ನಿಲ್ದಾಣ ನಿರ್ಮಾಣಕ್ಕೆ ಟೆಂಡರ್ ಪೂರ್ಣಗೊಂಡಿದೆ. ಹೊಸ ರೈಲು ನಿಲ್ದಾಣ ನಿರ್ಮಾಣದ ಬಳಿಕ, ಭಾರತ ಸರ್ಕಾರದಿಂದ ತುಮಕೂರು ರೈಲು ನಿಲ್ದಾಣಕ್ಕೆ ಶ್ರೀಗಳ ಹೆಸರು ನಾಮಕರಣ ಮಾಡಲಾಗುವುದು ಎಂದು ಹೇಳಿದರು. ಇನ್ನು, ತುಮಕೂರು ರೈಲು ನಿಲ್ದಾಣಕ್ಕೆ ಶೀಗ್ರಳ ಹೆಸರು ಮರುನಾಮಕರಣ ರಾಜ್ಯ ಸರ್ಕಾರ ಕೂಡ ಒಪ್ಪಿಕೊಂಡಿದ್ದು, ಭಾರತ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

