Budget 2022: ಸೋಲಾರ್ ವಿದ್ಯುತ್ ಉತ್ಪಾದನೆಗೆ ಅನುದಾನ ನೀಡಲು ಕೇಂದ್ರ ಸರ್ಕಾರ ನಿರ್ಧಾರ: ಬಜೆಟ್ ಮಂಡನೆ ವಿಡಿಯೋ ಇಲ್ಲಿದೆ
2020ರಲ್ಲಿ ದಾಖಲೆಯ 160 ನಿಮಿಷ ಬಜೆಟ್ ಮಂಡಿಸಿದ್ದರು. ಈ ಬಾರಿ 90 ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಸೋಲಾರ್ ವಿದ್ಯುತ್ ಕ್ಷೇತ್ರಕ್ಕೆ ಈ ಬಾರಿ ಆದ್ಯತೆ ನೀಡಲಾಗಿದೆ.
ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಬಜೆಟ್ ಮಂಡಿಸಿದರು. ಅವರು ಒಟ್ಟು ಇಲ್ಲಿಗೆ ನಾಲ್ಕು ಬಾರಿ ಬಜೆಟ್ ಮಂಡಿಸಿದ್ದಾರೆ. ಇದು ನರೇಂದ್ರ ಮೋದಿ (Narendra Modi) ನೇತೃತ್ವ ಸರ್ಕಾರದ 10ನೇ ಬಜೆಟ್. ಇನ್ನು ಕೊರೊನಾ ಕಾರಣದಿಂದಾಗಿ ಬಜೆಟ್ನಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಕಳೆದ 2 ವರ್ಷಗಳಿಂದ ಬಜೆಟ್ ಪ್ರತಿ ಮುದ್ರಿಸಲಾಗುತ್ತಿಲ್ಲ. ಬದಲಾಗಿದೆ ಡಿಜಿಟಲ್ ರೂಪದಲ್ಲಿ ಬಜೆಟ್ ಮಂಡಿಸಿದರು. 2020ರಲ್ಲಿ ದಾಖಲೆಯ 160 ನಿಮಿಷ ಬಜೆಟ್ ಮಂಡಿಸಿದ್ದರು. ಈ ಬಾರಿ 90 ನಿಮಿಷಗಳ ಕಾಲ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಸೋಲಾರ್ ವಿದ್ಯುತ್ ಕ್ಷೇತ್ರಕ್ಕೆ ಈ ಬಾರಿ ಆದ್ಯತೆ ನೀಡಲಾಗಿದೆ. 19,500 ಕೋಟಿ ಅನುದಾನ ಜತೆ ಸೋಲಾರ್ ಕ್ಷೇತ್ರಕ್ಕೆ ಕೇಂದ್ರ ಸಾಥ್ ನೀಡಲು ಮುಂದಾಗಿದೆ.. 2030ರೊಳಗೆ 280 ಗಿಗಾ ವ್ಯಾಟ್ ಸೋಲಾರ್ ವಿದ್ಯುತ್ ಗುರಿ ಹೊಂದಿದೆ.
Published on: Feb 01, 2022 01:45 PM
Latest Videos