ಎನ್ ಡಿ ಆರ್ ಎಫ್ ಅಡಿ ಬರ ಪರಿಹಾರ ನಿಧಿಯನ್ನು ಕೇಂದ್ರ ಸರ್ಕಾರ ಇದುವರೆಗೆ ಬಿಡುಗಡೆ ಮಾಡಿಲ್ಲ: ಸಿದ್ದರಾಮಯ್ಯ
ರಾಜ್ಯದ ಭೀಕರ ಬರದ ಸ್ಥಿತಿಯಲ್ಲಿದೆ, ಸರ್ಕಾರವೇನೂ ಕೈ ಕಟ್ಟಿ ಕೂತಿಲ್ಲ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಾತಾಡಿದ್ದು ಎಲ್ಲ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು. ತಮ್ಮ ತಮ್ಮ ಜಿಲ್ಲೆಗಳ ಬರ ಸಮೀಕ್ಷೆಯನ್ನು ನಡೆಸುವಂತೆ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ತಿಳಿಸಲಾಗಿದೆ ಅಂತಲೂ ಸಿದ್ದರಾಮಯ್ಯ ಹೇಳಿದರು.
ಹಾವೇರಿ: ಇಂದು ಹಾವೇರಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬರ ಪರಿಹಾರ ನಿಧಿಯನ್ನು ಇನ್ನೂ ಬಿಡುಗಡೆ ಮಾಡದ ಕೇಂದ್ರ ಸರ್ಕಾರ (Union Government) ಮೇಲೆ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರ ಬರದ ಸಮೀಕ್ಷೆ (drought survey) ನಡೆಸುತ್ತಿದೆ, ವರದಿಗಳನ್ನು ಆಧರಿಸಿ ಕಷ್ಟದಲ್ಲಿರುವ ರೈತರಿಗೆ ಪರಿಹಾರ ಬಿಡುಗಡೆ ಮಾಡೋದಾಗಿ ಹೇಳಿದರು. ಆದರೆ, ಎನ್ ಡಿ ಆರ್ ಎಫ್ ಅಡಿ ರಾಜ್ಯಕ್ಕೆ ನೀಡಬೇಕಿದ್ದ ಬರ ಪರಿಹಾರ ನಿಧಿಯನ್ನು ಕೇಂದ್ರ ಸರ್ಕಾರ ಇದುವರೆಗೆ ಬಿಡುಗಡೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ರಾಜ್ಯದಲ್ಲಿ ತೆರಿಗೆಯ ಮೂಲಕ ಸಂಗ್ರಹವಾದ ಹಣವನ್ನು ಕೇಂದ್ರಕ್ಕೆ ಕಳಿಸಿದ ಬಳಿಕ ಅದರ ಒಂದಷ್ಟು ಭಾಗ ರಾಜ್ಯಕ್ಕೆ ದಕ್ಕಬೇಕು, ಆದರೆ ಕೇಂದ್ರ ಆ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಹಾವೇರಿ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವು ಮತ್ತು ಇತರ ಕೆಲಸಗಳಿಗಾಗಿ ತಮ್ಮ ಸರ್ಕಾರ ಈಗಾಗಲೇ ರೂ. 226 ಕೋಟಿ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ