ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ನುಗ್ಗಿದ ಆಗಂತುಕರು: ಚಾಕು ಹಿಡಿದು ಓಡಾಟ, CCTVಯಲ್ಲಿ ದೃಶ್ಯ ಸೆರೆ

Edited By:

Updated on: Aug 06, 2026 | 8:30 AM

Kalaburagi Crime News: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯ ಕೇಂದ್ರಿಯ ವಿಶ್ವವಿದ್ಯಾಲಯದ ಮೂರು ವಸತಿ ಗೃಹಗಳ ಬಾಗಿಲು ಮುರಿದು ಆಗಂತುಕರು ನುಗ್ಗಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ, ಚಾಕು ಹಿಡಿದು ಓಡಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನರೋಣಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ, ಆಗಸ್ಟ್ 6: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿಯಿರುವ ಕೇಂದ್ರಿಯ ವಿಶ್ವವಿದ್ಯಾಲಯದ ವಸತಿ ಗೃಹಗಳಿಗೆ ಆಗಂತುಕರು ನುಗ್ಗಿರುವ ಘಟನೆ ನಡೆದಿದೆ. ಆಗಸ್ಟ್ 1ರ ಮಧ್ಯರಾತ್ರಿ ಮೂರ್ನಾಲ್ಕು ಮಂದಿ ಆಗಂತುಕರು ವಿಶ್ವವಿದ್ಯಾಲಯದ ಮೂರು ವಸತಿ ಗೃಹಗಳ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ, ಕೈಯಲ್ಲಿ ಚಾಕು ಹಿಡಿದು ವಸತಿ ಗೃಹದೊಳಗೆ ಓಡಾಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ವಿಶ್ವವಿದ್ಯಾಲಯದ ಪ್ರೊಫೆಸರ್‌ಗಳಾದ ಮಹಿಮಾರಾಜ್, ಡಾ. ಸಂಗಮೇಶ್ ಹಾಗೂ ಡಾ. ಎಂ. ಶಿವಮೂರ್ತಿ ಅವರಿಗೆ ಹಂಚಿಕೆಯಾಗಿದ್ದ ವಸತಿ ಗೃಹಗಳಿಗೆ ಆಗಂತುಕರು ನುಗ್ಗಿದ್ದಾರೆ.

ವಸತಿ ಗೃಹದಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿದಂತೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More