ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ರೂಪಾಯಿ ಕೂಡ ಕೇಂದ್ರ ಬಿಡುಗಡೆ ಮಾಡಿಲ್ಲ: ಶಿವಲಿಂಗೇಗೌಡ

|

Updated on: Sep 03, 2024 | 4:01 PM

ಕೇಂದ್ರ ಸರ್ಕಾರದ ಅನುದಾನಗಳನ್ನು ಆಧಾರವಾಗಿಟ್ಟುಕೊಂಡೇ ರಾಜ್ಯ ಸರ್ಕಾರ ಹಲವಾರು ಯೋಜನೆಗಳನನ್ನು ರೂಪಿಸಿದೆ, ಕೇಂದ್ರದಿಂದ ಹಣ ಬಿಡುಗಡೆಯಾಗದ ಕಾರಣ ಯೋಜನೆಗಳು ಅರಂಭಗೊಂಡಿಲ್ಲ, ಇನ್ನೂ ದಿನಗಳವರೆಗೆ ರಾಜ್ಯ ಸರ್ಕಾರ ಕಾದು ನೋಡಲು ಸಿದ್ಧವಿದೆ ಎಂದು ಶಾಸಕ ಹೇಳಿದರು.

ಹಾಸನ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಿ ₹ 5,300 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಘೋಷಣೆ ಮಾಡಿದ್ದರು. ಅದರೆ ಬೊಮ್ಮಾಯಿ ಅನುದಾನ ಬಿಡುಗಡೆ ಮಾಡಿಸಿಕೊಂಡು ಬರಲಿಲ್ಲ ಮತ್ತು ಇದುವರೆಗೆ ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕಾಲಮಿತಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣ: ಸಿಎಂ ಬಸವಾರಾಜ ಬೊಮ್ಮಾಯಿ  

Published on: Sep 03, 2024 03:55 PM