AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 16ನೇ ಜನಗಣತಿಗೆ ಇಂದು ಗೆಜೆಟ್ ನೋಟಿಫಿಕೇಶನ್, ಅಧಿಕಾರಿಗಳೊಂದಿಗೆ ಅಮಿತ್ ಶಾ ಚರ್ಚೆ

ದೇಶದ 16ನೇ ಜನಗಣತಿಗೆ ಇಂದು ಗೆಜೆಟ್ ನೋಟಿಫಿಕೇಶನ್, ಅಧಿಕಾರಿಗಳೊಂದಿಗೆ ಅಮಿತ್ ಶಾ ಚರ್ಚೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 16, 2025 | 12:26 PM

Share

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರು, ಉಡುಪಿ ಮತ್ತು ಇತರ ಕರಾವಳಿ ಹಾಗೂ ಮಲೆನಾಡ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾಡಳಿತಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿವೆ. ಈ ಜಿಲ್ಲೆಗಳಲ್ಲಿ ಬೆಳಗಿನಿಂದಲೇ ಮಳೆ ಸುರಿಯಲಾರಂಭಿಸಿದೆ.

ಬೆಂಗಳೂರು, ಜೂನ್ 16: ಬಹಳ ವರ್ಷಗಳಿಂದ ಕಾತುರದಿಂದ ನಿರೀಕ್ಷಿಸಲಾಗುತ್ತಿದ್ದ ಜನಗಣತಿ ಪ್ರಕ್ರಿಯೆ ಆರಂಭಿಸಲು ಇಂದು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ (gazette notification) ಹೊರಡಿಸಲಿದೆ. ವಿಷಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ನಿನ್ನೆ ಗೃಹ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ಬಾರಿಯ ಜನಗಣತಿಯಲ್ಲಿ ಮೊದಲ ಬಾರಿಗೆ ಜಾತಿಗಣತಿಯೂ ನಡೆಯಲಿದೆ. ಗೃಹ ಸಚಿವಾಲಯದಿಂದ ಲಭ್ಯವಾಗಿರರುವ ಮಾಹಿತಿಯ ಪ್ರಕಾರ 34 ಲಕ್ಷ ಗಣತಿದಾರರು ಮತ್ತು 1.3 ಲಕ್ಷ ಮೇಲ್ವಿಚಾರಕರು ಅತ್ಯುತ್ತಮ ತಂತ್ರಜ್ಞಾನದದ ಮೊಬೈಲ್ ಡಿಜಿಟಲ್ ಉಪಕರಣಗಳನ್ನು ಬಳಸಿ ಜನಗಣತಿ ಕಾರ್ಯ ನಡೆಸಲಿದ್ದಾರೆ.

ಇದನ್ನೂ ಓದಿ:  ಯಾವಾಗ ಮಾಡ್ತೀರ ಹೇಳಿ; ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರಕ್ಕೆ ರಾಹುಲ್ ಗಾಂಧಿ ಸ್ವಾಗತ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More