ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಒಂದು ದೇಶ ಒಂದು ಚುನಾವಣೆ ಮಸೂದೆ ತರುವ ಪ್ರಯತ್ನ ನಡೆದಿದೆ: ಡಿಕೆ ಶಿವಕುಮಾರ್

ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಒಂದು ದೇಶ ಒಂದು ಚುನಾವಣೆ ಮಸೂದೆ ತರುವ ಪ್ರಯತ್ನ ನಡೆದಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 13, 2024 | 11:09 AM

ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಮಸೂದೆಗೆ ಅನುಮೋದನೆ ನೀಡಲಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ ಈ ಮಸೂದೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈಗ ಜಾರಿಯಲ್ಲಿರುವ ಅಧಿವೇಶನದಲ್ಲೇ ಸದನದ ಎರಡೂ ಸಭೆಗಳಲ್ಲಿ ಮಂಡಿಸುವ ಸಾಧ್ಯತೆಯಿದೆ.

ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಒಂದು ದೇಶ ಒಂದು ಚುನಾವಣೆ ಮಸೂದೆಯನ್ನು ಪಕ್ಷದ ರಾಷ್ಟ್ರೀಯ ನಾಯಕರು ವಿರೋಧಿಸಿದ್ದಾರೆ, ಇದನ್ನು ಜಾರಿಗೊಳಿಸುವುದು ದುಸ್ಸಾಧ್ಯ, ಕೆಲವು ರಾಜ್ಯಗಳಲ್ಲಿ ಈಗಷ್ಟೇ ಚುನಾವಣೆಯಾಗಿದೆ, ಕೆಲವು ಕಡೆ ಚುನಾವಣೆ ನಡೆದು ಒಂದೂವರೆ ವರ್ಷ-ಎರಡೂವರೆ ವರ್ಷ ಆಗಿದೆ, ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರದ್ದು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Karnataka Assembly Session: ಎಸ್ ಎಂ ಕೃಷ್ಣ ಅವರನ್ನು ರಾಜ್ಯಸಭಾ ಸದಸ್ಯ ಮಾಡಿದ ಸಂದರ್ಭ ಸದನದಲ್ಲಿ ವಿವರಿಸಿದ ಶಿವಕುಮಾರ್