Video: CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಮ್ ಅಂಟಿಸಿದ ಭದ್ರತಾ ಸಿಬ್ಬಂದಿ

Updated on: Apr 23, 2026 | 12:11 PM

CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರು ಧರಿಸಿದ್ದ ಮೂಗುನತ್ತುಗಳಿಗೆ ಪರೀಕ್ಷಾ ಸಿಬ್ಬಂದಿ ಗಮ್ ಟೇಪ್ ಅಂಟಿಸಿದ ಘಟನೆ ವರದಿಯಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತಾ ನಿಯಮಗಳ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಆಭರಣ ತೆಗೆಯಲು ಸೂಚಿಸಿದರೂ ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ ಸಿಬ್ಬಂದಿ ತಾತ್ಕಾಲಿಕ ಪರಿಹಾರವಾಗಿ ಟೇಪ್ ಅಂಟಿಸಿದ್ದಾರೆ.

ಎಂಜಿನಿಯರಿಂಗ್‌ ಸೇರಿದಂತೆ ನಾನಾ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪ್ರಾರಂಭವಾಗಿದೆ. ಇದೀಗ CET ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯರು ಧರಿಸಿದ್ದ ಮೂಗು ಬೊಟ್ಟಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಗಮ್ ಟೇಪ್ ಅಂಟಿಸಿದ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷಾ ಕೇಂದ್ರಗಳಲ್ಲಿ ಆಭರಣಗಳನ್ನು ಧರಿಸುವುದನ್ನು ನಿಷೇಧಿಸುವ ಕಟ್ಟುನಿಟ್ಟಿನ ಭದ್ರತಾ ನಿಯಮಗಳ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಮೂಗುತ್ತಿ ಧರಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಆರಂಭದಲ್ಲಿ ಅವುಗಳನ್ನು ತೆಗೆದುಹಾಕುವಂತೆ ಸೂಚನೆ ನೀಡಲಾಗಿತ್ತು. ಆಭರಣ ತೆಗೆಯಲು ಸೂಚಿಸಿದರೂ ಸಾಧ್ಯವಾಗದ ವಿದ್ಯಾರ್ಥಿನಿಯರಿಗೆ ಸಿಬ್ಬಂದಿ ತಾತ್ಕಾಲಿಕ ಪರಿಹಾರವಾಗಿ ಟೇಪ್ ಅಂಟಿಸಿರುವುದು ವರದಿಯಾಗಿದೆ.

ಇದನ್ನೂ ಓದಿ: ಸಿಇಟಿ ಪರೀಕ್ಷೆಗೆ ಹೋಗುವವರ ಗಮನಕ್ಕೆ; ಕಾಲರ್ ಇಲ್ಲದ ಅರ್ಧ ತೋಳಿನ ಬಟ್ಟೆ ಕಡ್ಡಾಯ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More