ಹಾಸನ ಜಿಲ್ಲೆಯಲ್ಲಿ ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಪಟ್ಟಣದ ನಿವಾಸಿಗಳಲ್ಲಿ ಹೆಚ್ಚಿದ ಆತಂಕ

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 24, 2024 | 3:55 PM

ಅರಸೀಕೆರೆ(Arsikere) ಪಟ್ಟಣದ ಮಾರುತಿ ನಗರದ ಕೆಎಸ್​ಆರ್​ಟಿಸಿ ಬಸ್ ಡಿಪೋ ಹಿಂಭಾಗದಲ್ಲಿ ಈ ಖತರ್ನಾಕ್ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡಿದೆ. ಕೈಯಲ್ಲಿ ಆಯುಧ ಹಿಡಿದು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಳ್ಳನೊಬ್ಬ ಹೊಂಚು ಹಾಕುತ್ತಾ, ಓಡಾಡುತ್ತಿದ್ದಾನೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಾಸನ, ಜು.24: ಹಾಸನ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷವಾಗಿದ್ದು, ಅರಸೀಕೆರೆ(Arsikere) ಪಟ್ಟಣದ ಮಾರುತಿ ನಗರದ ಕೆಎಸ್​ಆರ್​ಟಿಸಿ ಬಸ್ ಡಿಪೋ ಹಿಂಭಾಗದಲ್ಲಿ ಈ ಖತರ್ನಾಕ್ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡಿದೆ. ಕೈಯಲ್ಲಿ ಆಯುಧ ಹಿಡಿದು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಳ್ಳನೊಬ್ಬ ಹೊಂಚು ಹಾಕುತ್ತಾ, ಓಡಾಡುತ್ತಿದ್ದಾನೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರಸೀಕೆರೆ ಪಟ್ಟಣ ಪ್ರದೇಶದ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಚಡ್ಡಿಗ್ಯಾಂಗ್ ಕಾಣಿಸಿಕೊಳ್ಳುತ್ತಿದ್ದು, ಕೆಲ ತಿಂಗಳ ಹಿಂದೆ ಕೂಡ ನಗರದಲ್ಲಿ ಆತಂಕ ಮೂಡಿಸಿತ್ತು. ಇದೀಗ ಮತ್ತೆ ಈ ಗ್ಯಾಂಗ್​ ಆ್ಯಕ್ಟಿವ್​ ಆಗಿದ್ದು, ಪಟ್ಟಣದ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ. ಈ ಹಿನ್ನಲೆ ಪೊಲೀಸ್ ಬೀಟ್ ಹೆಚ್ಚಿಸುವಂತೆ ಅರಸೀಕೆರೆ ನಗರ ಠಾಣೆ ವ್ಯಾಪ್ತಿಯ ಪೊಲೀಸರಿಗೆ ಸಾರ್ವಜನಿಕರು ಆಗ್ರಹ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on