ದೆಹಲಿಯಲ್ಲಿ ರಸ್ತೆ ಮಧ್ಯೆ ಮಹಿಳೆಯಿಂದ ಸರ ದೋಚಿ, ಕೊಂದು ಪರಾರಿ

Updated on: Aug 08, 2025 | 10:21 PM

ದೆಹಲಿಯ ಶಕರ್‌ಪುರ ಪೊಲೀಸ್ ಠಾಣೆಯ ಡಿ ಬ್ಲಾಕ್ ಪ್ರದೇಶದಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಅಲ್ಲಿ ದರೋಡೆಕೋರರು ಮಹಿಳೆಯೊಬ್ಬಳನ್ನು ನಿರ್ದಯವಾಗಿ ನೆಲಕ್ಕೆ ಬೀಳಿಸಿಕೊಂಡು ದರೋಡೆ ಮಾಡಿ, ನಂತರ ಪರಾರಿಯಾಗಿದ್ದಾರೆ. ಈ ದೃಶ್ಯಗಳಲ್ಲಿ ಒಬ್ಬ ವ್ಯಕ್ತಿ ಮಹಿಳೆಯನ್ನು ರಹಸ್ಯವಾಗಿ ಹಿಂಬಾಲಿಸಿ ಆಕೆಯನ್ನು ಹಿಂದಿನಿಂದ ಹಿಡಿದು ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಚಿನ್ನದ ಕಿವಿಯೋಲೆಗಳನ್ನು ಕಸಿದುಕೊಳ್ಳುತ್ತಿರುವ ದೃಶ್ಯವನ್ನು ನೋಡಬಹುದು. ಇದರಿಂದ ಆ ಮಹಿಳೆ ಮೂರ್ಛೆ ಹೋಗಿ ನೆಲಕ್ಕೆ ಕುಸಿದು ಬೀಳುತ್ತಿದ್ದಂತೆ ದರೋಡೆಕೋರ ಆಕೆಯನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ. 

ನವದೆಹಲಿ, ಆಗಸ್ಟ್ 8: ದೆಹಲಿಯ ಶಕರ್‌ಪುರದಲ್ಲಿ ಆಘಾತಕಾರಿ (Shocking News) ರೀತಿಯಲ್ಲಿ ಕಳ್ಳರು ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡು, ಆಕೆಯನ್ನು ಕೊಂದು ಪರಾರಿಯಾಗಿದ್ದಾರೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಈ ದೃಶ್ಯಗಳಲ್ಲಿ ಒಬ್ಬ ವ್ಯಕ್ತಿ ಮಹಿಳೆಯನ್ನು ರಹಸ್ಯವಾಗಿ ಹಿಂಬಾಲಿಸಿ ಆಕೆಯನ್ನು ಹಿಂದಿನಿಂದ ಹಿಡಿದು ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಚಿನ್ನದ ಕಿವಿಯೋಲೆಗಳನ್ನು ಕಸಿದುಕೊಳ್ಳುತ್ತಿರುವ ದೃಶ್ಯವನ್ನು ನೋಡಬಹುದು. ಇದರಿಂದ ಆ ಮಹಿಳೆ ಮೂರ್ಛೆ ಹೋಗಿ ನೆಲಕ್ಕೆ ಕುಸಿದು ಬೀಳುತ್ತಿದ್ದಂತೆ ದರೋಡೆಕೋರ ಆಕೆಯನ್ನು ಉಸಿರುಗಟ್ಟಿಸಿ ಕೊಂದಿದ್ದಾನೆ. ಈ ಘಟನೆ ನಡೆದ ಸ್ಥಳದಿಂದ ಕೆಲವೇ ಹೆಜ್ಜೆಗಳ ದೂರದಲ್ಲಿ ಶಹದಾರಾ ವಲಯ ಎಂಸಿಡಿ ಅಧ್ಯಕ್ಷರ ಮನೆ ಇದೆ. ಹೀಗಾಗಿ, ಅಲ್ಲಿನ ಜನರು ಪೊಲೀಸ್ ವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More