ಎಲ್ಲರಿಗೂ ಕಣ್ಣೀರು ಹಾಕಿಸಿದ ಬಿಗ್ ಬಾಸ್; ಒಬ್ಬೊಬ್ಬರ ನೋವು ಒಂದೊಂದು ರೀತಿ

Updated on: Oct 28, 2024 | 4:52 PM

ಬಿಗ್​ ಬಾಸ್​ ಮನೆಯಲ್ಲಿ ಚೈತ್ರಾ ಕುಂದಾಪುರ, ಐಶ್ವರ್ಯಾ ಸಿಂಧೋಗಿ, ಉಗ್ರಂ ಮಂಜು, ಗೋಲ್ಡ್ ಸುರೇಶ್, ತ್ರಿವಿಕ್ರಮ್ ಮುಂತಾದವರು ಕಣ್ಣೀರು ಹಾಕಿದ್ದಾರೆ. ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ. ಕನ್ಫೆಷನ್ ರೂಮ್​ನಲ್ಲಿ ಎಲ್ಲರೂ ತಮ್ಮ ಬದುಕಿನ ನೋವಿನ ಸಂದರ್ಭವನ್ನು ಮೆಲುಕು ಹಾಕಿದ್ದಾರೆ. ಸೋಮವಾರ (ಅ.28) ಈ ಸಂಚಿಕೆ ಪ್ರಸಾರ ಆಗಲಿದೆ.

‘ಒಂದು ವರ್ಷ ನಾನು ಯಾರದ್ದೋ ಮನೆಯಲ್ಲಿ ಮುಸುರೆ ತಿಕ್ಕುತ್ತಿದ್ದೆ’ ಎಂದು ಹೇಳುತ್ತಾ ಚೈತ್ರಾ ಕುಂದಾಪುರ ಅವರು ಗಳಗಳನೆ ಅತ್ತಿದ್ದಾರೆ. ‘ನಮ್ಮ ತಾಯಿ ಹಾಸಿಗೆ ಹಿಡಿದಿದ್ದರು. ಆಗ ಸಂಬಂಧಿಕರು ನಮ್ಮ ಅಮ್ಮನ ತಲೆ ತುಂಬುತ್ತಿದ್ದರು. ನಾನು ಅಮ್ಮನ ಮೇಲೆ ತುಂಬ ಕಿರುಚಾಡಿದೆ. ಮಾತನಾಡಿಸಿ ಕೆಲವು ದಿನ ಆದ ಮೇಲೆ ಅವರು ನನ್ನ ಜೊತೆ ಇರಲ್ಲ’ ಎಂದು ಐಶ್ವರ್ಯಾ ಅವರು ಕಣ್ಣೀರು ಹಾಕಿದ್ದಾರೆ. ‘ಕಲರ್ಸ್​ ಕನ್ನಡ’ ಹಾಗೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಅ.28ರ ರಾತ್ರಿ 9.30ಕ್ಕೆ ಈ ಎಪಿಸೋಡ್​ ಪ್ರಸಾರವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More