ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ಕುಂದಾಪುರ ತಿರುಗೇಟು
ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಜಮೀರ್ ಅಹ್ಮದ್ ನೀಡಿದ ಹೇಳಿಕೆಗೆ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಿಂದ ಕಳೆದ ಭಾನುವಾರ ಎಲಿಮಿನೇಟ್ ಆದ ಚೈತ್ರಾ ಅವರು ದೊಡ್ಮನೆಯಿಂದ ಹೊರಗೆ ಬಂದು ಟಿವಿ9 ಜೊತೆ ಮಾತನಾಡಿದ್ದಾರೆ.
‘ತಪ್ಪು ಮಾಡಿದವರು ಯಾರೇ ಆಗಿರಲಿ, ಅವರಿಗೆ ಶಿಕ್ಷೆ ಆಗಬೇಕು. ಈಗ ಆ ಹಸು ಹಾಲು ಕೊಡಲು ಸಾಧ್ಯವಾಗಲ್ಲ. ಬೇರೆ ಹಸು ಕೊಡಿಸುತ್ತೇವೆ’ ಎಂದು ಜಮೀರ್ ಅಹ್ಮದ್ ಹೇಳಿದ್ದಕ್ಕೆ ಚೈತ್ರಾ ಕುಂದಾಪುರ ಪ್ರತಿಕ್ರಿಯಿಸಿದ್ದಾರೆ. ‘ಗೋವು ಜೊತೆ ನಮಗೆ ಅವಿನಾಭಾವ ಸಂಬಂಧ ಇದೆ. ಧಾರ್ಮಿಕ ನಂಬಿಕೆಗಳು ಕೂಡ ಇವೆ. ಒಂದಕ್ಕೆ ಇನ್ನೊಂದು ಹಸು ಕೊಟ್ಟರೆ ನ್ಯಾಯ ಸಿಕ್ಕಂತೆ ಆಗಲ್ಲ. ಈ ಕೃತ್ಯ ಇನ್ನೊಮ್ಮೆ ರಿಪೀಟ್ ಆಗದ ಹಾಗೆ ಕ್ರಮ ತೆಗೆದುಕೊಳ್ಳಬೇಕು’ ಎಂದಿದ್ದಾರೆ ಚೈತ್ರಾ ಕುಂದಾಪುರ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.