ಬಿಗ್ ಬಾಸ್ ಮುಗಿದ ಬಳಿಕ ಎಲ್​ಎಲ್​ಬಿ ಓದಲು ರೆಡಿ ಆದ ಚೈತ್ರಾ ಕುಂದಾಪುರ

Updated on: Jan 14, 2025 | 11:51 AM

ಚೈತ್ರಾ ಕುಂದಾಪುರ ಅವರು ಕಳೆದ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಔಟ್ ಆದರು. 105ಕ್ಕೂ ಹೆಚ್ಚು ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಹೊರಗಿದ್ದಾರೆ. ಅವರು ಬಿಗ್ ಬಾಸ್ ಮುಗಿದ ಬಳಿಕ ಮುಂದಿನ ಯೋಜನೆಗಳು ಏನು ಎಂಬುದನ್ನು ಹೇಳಿದ್ದಾರೆ.

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಪೂರ್ಣಗೊಳಿಸಿದ್ದಾರೆ. ಹಾಗಾದರೆ ಬಿಗ್ ಬಾಸ್ ಜರ್ನಿ ಬಳಿಕ ಮುಂದೇನು? ಈ ಪ್ರಶ್ನೆಗೆ ಅವರು ಉತ್ತರ ಕೊಟ್ಟಿದ್ದಾರೆ. ‘ಎಲ್​ಎಲ್​ಬಿ ಓದಬೇಕು ಎಂದಿದೆ. ಮಾಡದ ತಪ್ಪಿಗೆ ಅನೇಕರು ಶಿಕ್ಷೆ ಅನುಭವಿಸುತ್ತಿದ್ದಾರೆ. ಅವರ ಪರ ನಿಲ್ಲಬೇಕಿದೆ’ ಎಂದಿದ್ದಾರೆ ಚೈತ್ರಾ ಕುಂದಾಪುರ. ಆ ವಿಡಿಯೋ ಇಲ್ಲಿದೆ.  ಅವರು ಹೇಳಿದ್ದು ಏನು ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More