ಕೋಟಿ-ಕೋಟಿ ಒಡತಿ ಚೈತ್ರಾ ಕುಂದಾಪುರ, ಈಕೆಯ ಖಜಾನೆ ಕಂಡು ಸಿಸಿಬಿ ಅಧಿಕಾರಿಗಳೇ ಶಾಕ್

Edited By:

Updated on: Sep 17, 2023 | 4:19 PM

ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದ್ದು, ಇದೀಗ ಆಕೆಯ ಖಜಾನೆ ಬಟಾಬಯಲಾಗಿದೆ.

ಉಡುಪಿ (ಸೆ.17): ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಇದೀಗ ಬಹಿರಂಗವಾಗುತ್ತಿದೆ. ಚೈತ್ರಾ ಕುಂದಾಪುರ ಮನೆಯಲ್ಲಿ65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಸಂಬಂಧಿಕರ ಹೆಸರಿನಲ್ಲಿ ಕೋಟಿ ರೂಪಾಯಿ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ. ಎಲ್ಲಾ ಸೇರಿಸಿ ಸುಮಾರು 4 ಕೋಟಿ ರೂ. ನಗದು ಪತ್ತೆಯಾಗಿದ್ದು, ಚೈತ್ರಾ ಕುಂದಾಪುರ ಖಜಾನೆ ಕಂಡು ಸಿಸಿಬಿ ಪೊಲೀಸರೇ ದಂಗಾಗಿದ್ದಾರೆ. ಹಾಗಾದ್ರೆ, ಚೈತ್ರಾ ಖಜಾನೆಯಲ್ಲಿ ಏನೆಲ್ಲ ಸಿಕ್ತು ಎನ್ನುವುದನ್ನು ನೋಡಿ.

Published on: Sep 17, 2023 01:14 PM