‘ಆಟಕ್ಕೆ ಅವಕಾಶ ಕೊಡಲ್ಲ’; ಗೌತಮಿ ತಂಡ ಸೇರಿ ಗಳಗಳನೆ ಅತ್ತ ಚೈತ್ರಾ ಕುಂದಾಪುರ
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರಿಗೂ ಮನರಂಜನೆ ನೀಡುತ್ತಾ ಸಾಗುತ್ತಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಆಟ ಕೂಡ ದಿನ ಕಳೆದಂತೆ ಏಳ್ಗೆ ಕಾಣುತ್ತಿದೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಿದ್ದಾರೆ. ಈಗ ಚೈತ್ರಾ ಕುಂದಾಪುರ ಅವರು ಒಂದು ಕಾರಣಕ್ಕೆ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಚೈತ್ರಾ ಕುಂದಾಪುರ ಅವರಿಗೆ ಇತ್ತೀಚೆಗೆ ಆಟ ಆಡೋಕೆ ಅವಕಾಶ ಸಿಗುತ್ತಿರಲಿಲ್ಲ. ಅವರನ್ನು ಕೇವಲ ಉಸ್ತುವಾರಿಗೆ ಸೀಮಿತ ಮಾಡಲಾಗುತ್ತಿತ್ತು. ಈ ವಾರವೂ ಅದು ಮುಂದುವರಿದಿದೆ. ಇದಕ್ಕೆ ಅವರು ಕೋಪಗೊಂಡಿದ್ದಾರೆ. ಗೌತಮಿ ವಿರುದ್ಧ ಅಸಮಾಧಾನ ಹೊರಹಾಕಿ ಕೂಗಾಡಿದ್ದಾರೆ. ಈ ಪ್ರೋಮೋನ ಕಲರ್ಸ್ ಕನ್ನಡ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 12, 2024 08:15 AM