ಸಿಸಿಬಿ ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು

Edited By:

Updated on: Sep 15, 2023 | 9:47 AM

ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ ಸಿಸಿಬಿ ಪೊಲೀಸರು ತಿವ್ರ ವಿಚಾರಣೆ ನಡೆಸುತ್ತಿದ್ದಾರೆ. ಎರಡನೇ ದಿನ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಇಂದು ಅನಾರೋಗ್ಯದಿಂದ ಕುಸಿದುಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು, ಸೆ.15: ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ನಿನ್ನೆಯಿಂದ ಚೈತ್ರಾ ಕುಂದಾಪುರ (Chaitra Kundapur) ಅವರನ್ನು ಸಿಸಿಬಿ ಪೊಲೀಸರು ತಿವ್ರ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ಎರಡನೇ ದಿನವಾದ ಇಂದು ಚೈತ್ರಾ ಅನಾರೋಗ್ಯದಿಂದ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ. ಕೂಡಲೇ ಅವರನ್ನು ಸಿಸಿಬಿ ಕಚೇರಿಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ