AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ಗೊಂದಲದ ಗೂಡು: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

ಜಾತಿಗಣತಿ ಗೊಂದಲದ ಗೂಡು: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

ಕಿರಣ್​ ಹನಿಯಡ್ಕ
| Updated By: ಪ್ರಸನ್ನ ಹೆಗಡೆ|

Updated on: Oct 07, 2025 | 1:51 PM

Share

ರಾಜ್ಯದಲ್ಲಿ ನಡೆಯುತ್ತಿರೋ ಜಾತಿಗಣತಿ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಧಾನ ಪರಿಷತ್​ ವಿಪಕ್ಕ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಲ್ಲಿ ಇನ್ನೂ ಸರಿಯಾಗಿ ಸಮೀಕ್ಷೆಯೇ ಶುರುವಾಗಿಲ್ಲ. ಗಣತಿ ಬಗ್ಗೆ ಸರ್ಕಾರ ನೀಡುತ್ತಿರುವ ಅಂಕಿ-ಅಂಶಗಳೂ ತಪ್ಪು ಎಂದು ಅವರು ಆರೋಪಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್​ 07: ಜಾತಿಗಣತಿ ಗೊಂದಲದ ಗೂಡಾಗಿದ್ದು, ಈ ಬಗ್ಗೆ ಸರ್ಕಾರ ತಪ್ಪು ಅಂಕಿ-ಅಂಶಗಳನ್ನ ನೀಡುತ್ತಿದೆ. ಬೆಂಗಳೂರಲ್ಲಿ ಇನ್ನೂ ಸರಿಯಾಗಿ ಸಮೀಕ್ಷೆಯೇ ಶುರುವಾಗಿಲ್ಲ ಎಂದು ವಿಧಾನ ಪರಿಷತ್​ ವಿಪಕ್ಕ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆರೋಪಿಸಿದ್ದಾರೆ. ಬಿಜೆಪಿ ಜಾತಿ ಗಣತಿ ವಿರೋಧಿ ಅಲ್ಲ. ಆದರೆ ಜಾತಿಗಳನ್ನು ಒಡೆಯುವ ಕೆಲಸ ಸಿಎಂ ಮಾಡುತ್ತಿದ್ದಾರೆ. ಲಿಂಗಾಯತರಿಗೆ ಇಲ್ಲದ ಉಸಾಬರಿ ಸಿದ್ದರಾಮಯ್ಯಗೆ ಯಾಕೆ? ಇವರೇನು ಧರ್ಮಗುರುಗಳಾ? ಇಂದು ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಪ್ರಸನ್ನಾನಂದ ಸ್ವಾಮೀಜಿ ಬಂದಿಲ್ಲ. ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಕೈವಾಡ ಇದೆ. ವಾಲ್ಮೀಕಿ ಸಮುದಾಯದ ನಾಯಕ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಕಾರಣ ಇಡೀ ಸಮುದಾಯ ನಿಮ್ಮ ವಿರುದ್ಧ ತಿರುಗಿ ಬಿದ್ದಿದೆ ಎಂದು ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.