AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ

ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: May 10, 2026 | 8:48 AM

Share

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ 65ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ನಂತರ, ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ಚಿತ್ರದುರ್ಗ, ಮೇ 10: ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ (65) ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿವಿಧ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ. ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More