AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲೋ ಸಂಸದ್ ಪ್ರತಿಭಟನೆ ವೇಳೆ ಪೊಲೀಸರು- ಪ್ರತಿಭಟನಾಕಾರರ ನಡುವೆ ಕಲ್ಲು ತೂರಾಟ!

ಚಲೋ ಸಂಸದ್ ಪ್ರತಿಭಟನೆ ವೇಳೆ ಪೊಲೀಸರು- ಪ್ರತಿಭಟನಾಕಾರರ ನಡುವೆ ಕಲ್ಲು ತೂರಾಟ!

ಸುಷ್ಮಾ ಚಕ್ರೆ
|

Updated on: Jul 20, 2026 | 6:43 PM

Share

'ಚಲೋ ಸಂಸದ್' ಮೆರವಣಿಗೆಗಾಗಿ ಸಾವಿರಾರು ಪ್ರತಿಭಟನಾಕಾರರು ಒಟ್ಟಾಗಿ ಸೇರಿದ ಹಿನ್ನೆಲೆಯಲ್ಲಿ ಇಡೀ ಮಧ್ಯ ದೆಹಲಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲಾಗಿತ್ತು. ಜನಸಮೂಹವನ್ನು ನಿಯಂತ್ರಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಭಾರಿ ಪ್ರಮಾಣದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದಿಂದಾಗಿ ಸದ್ಯ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ನವದೆಹಲಿ, ಜುಲೈ 20: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರತ್ತ ಪ್ರತಿಭಟನಾಕಾರರು ಕಲ್ಲು ಎಸೆದಿದ್ದಾರೆ. ಇದರಿಂದ ಹಲವು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಇದಕ್ಕೆ ಪ್ರತಿಯಾಗಿ ಕೆಲವು ಪೊಲೀಸರು ಕೂಡ ಪ್ರತಿಭಟನಾಕಾರರತ್ತ ಕಲ್ಲು ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

‘ಚಲೋ ಸಂಸದ್’ ಮೆರವಣಿಗೆಗಾಗಿ ಸಾವಿರಾರು ಪ್ರತಿಭಟನಾಕಾರರು ಒಟ್ಟಾಗಿ ಸೇರಿದ ಹಿನ್ನೆಲೆಯಲ್ಲಿ ಇಡೀ ಮಧ್ಯ ದೆಹಲಿಯಾದ್ಯಂತ ಭದ್ರತೆಯನ್ನು ತೀವ್ರಗೊಳಿಸಲಾಗಿತ್ತು. ಜನಸಮೂಹವನ್ನು ನಿಯಂತ್ರಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಭಾರಿ ಪ್ರಮಾಣದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು. ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದಿಂದಾಗಿ ಸದ್ಯ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us