ಚಾಮರಾಜನಗರ: ಚಲಿಸುತ್ತಿದ್ದ KSRTC ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ; ಅದೃಷ್ಟವಶಾತ್ ಪ್ರಯಾಣಿಕರು ಪಾರು
ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಸರ್ಕಾರಿ ಬಸ್, ಚಾಮರಾಜನಗರ (Chamarajanagar) ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಅರಣ್ಯದ ರಸ್ತೆಯಲ್ಲಿ ಏಕಾಎಕಿ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೇತ್ತ ಚಾಲಕ, ಬಸ್ ನಿಲ್ಲಿಸಿದ್ದಾರೆ. ಕೂಡಲೇ 50ಕ್ಕೂ ಹೆಚ್ಚು ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.
ಚಾಮರಾಜನಗರ, ನ.18: ಶಕ್ತಿಯೋಜನೆ ಹಿನ್ನಲೆ ಹಳೆ ಬಸ್ಗಳನ್ನು ಸಾರಿಗೆ ಇಲಾಖೆ ರಸ್ತೆಗೆ ಇಳಿಸುತ್ತಿದೆ. ಇದರ ಬೆನ್ನಲ್ಲೇ ತಾಂತ್ರಿಕ ದೋಷ ಕಾಣಿಸಿಕೊಳ್ಳುತ್ತಿದೆ. ಅದರಂತೆ ಇದೀಗ ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಸರ್ಕಾರಿ ಬಸ್, ಚಾಮರಾಜನಗರ (Chamarajanagar) ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಅರಣ್ಯದ ರಸ್ತೆಯಲ್ಲಿ ಏಕಾಎಕಿ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೇತ್ತ ಚಾಲಕ, ಬಸ್ ನಿಲ್ಲಿಸಿದ್ದಾರೆ. ಕೂಡಲೇ 50ಕ್ಕೂ ಹೆಚ್ಚು ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ಚಾಲಕ ಹಾಗೂ ನಿರ್ವಾಹಕ ಬಸ್ನಲ್ಲಿದ್ದ ಪ್ರಯಾಣಿಕರ ಸಹಾಯದಿಂದ ಬೆಂಕಿ ನಂದಿಸಲು ಮುಂದಾಗಿದ್ದು, ಅಷ್ಟರಲ್ಲಿ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಆಗಿಲ್ಲ, ಈ ಕುರಿತು ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Nov 18, 2023 04:26 PM