ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್​​: ಅಟ್ಟಾಡಿಸಿ ಅಟ್ಯಾಕ್​

Edited By:

Updated on: May 21, 2026 | 8:54 AM

ಚಾಮರಾಜನಗರ ಗಡಿಯ ತಾಳವಾಡಿ ಬಳಿ ಸಂಜೆಯಾಗುತ್ತಿದ್ದಂತೆ ರಸ್ತೆಗಿಳಿಯುತ್ತಿರುವ ಒಂಟಿ ಸಲಗ, ವಾಹನ ಸವಾರರನ್ನು ಅಟ್ಟಾಡಿಸುತ್ತಿದ್ದು ಗಡಿ ಗ್ರಾಮಗಳ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಬೆಳಗಿನ ವೇಳೆ ಜಮೀನುಗಳತ್ತ ಲಗ್ಗೆ ಇಡುತ್ತಿದ್ದ ಕಾಡಾನೆಗಳು ಇದೀಗ ಗ್ರಾಮಗಳ ಸುತ್ತಮುತ್ತವೇ ಸಂಚಾರ ನಡೆಸುತ್ತಿರೋದು ಸ್ಥಳೀಯರ ಆತಂಕ ಹೆಚ್ಚಿಸಿದೆ.

ಚಾಮರಾಜನಗರ, ಮೇ 21: ಜಿಲ್ಲೆಯ ತಮಿಳುನಾಡಿನ ಗಡಿ ತಾಳವಾಡಿಯ ಮರೂರು ಬಳಿ ಸಂಜೆಯಾದರೆ ಒಂಟಿ ಸಲಗ ರಸ್ತೆಗಿಳಿಯುತ್ತಿದ್ದು, ಗ್ರಾಮಸ್ಥರು ಆತಂಕದಲ್ಲಿಯೇ ದಿನ ದೂಡುವಂತಾಗಿದೆ. ವಾಹನಗಳು ಬಂದರೆ ಈ ಆನೆ ಅಟ್ಟಾಡಿಸುವ ಕಾರಣ ಸಂಜೆ ವೇಳೆ ರಸ್ತೆಯಲ್ಲಿ ಸಂಚರಿಸಲೂ ವಾಹನ ಸವಾರರು ಭಯಪಡಬೇಕಾದ ಸ್ಥಿತಿ ಉದ್ಭವಿಸಿದೆ. ಬೆಳಗಿನ ವೇಳೆ ಜಮೀನುಗಳತ್ತ ಲಗ್ಗೆ ಇಡುತ್ತಿದ್ದ ಕಾಡಾನೆಗಳು ಇದೀಗ ಗ್ರಾಮಗಳ ಸುತ್ತಮುತ್ತವೇ ಸಂಚಾರ ನಡೆಸುತ್ತಿರೋದು ಆತಂಕ ಹೆಚ್ಚಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More