ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ: ವಿಡಿಯೋ ವೈರಲ್
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಆಯುಧ ಪೂಜೆಯ ದಿನ ಕಾಂಗ್ರೆಸ್ ಮುಖಂಡ ಕಬ್ಬಳ್ಳಿ ಮಹೇಶ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಗುಂಡು ಹಾರಿಸಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅವರ ವರ್ತನೆ ಚರ್ಚೆಗೆ ಕಾರಣವಾಗಿದೆ.
ಚಾಮರಾಜನಗರ, ಅಕ್ಟೋಬರ್ 22: ಆಯುಧ ಪೂಜೆಯ ದಿನ ಗಾಳಿಯಲ್ಲಿ ಗುಂಡು ಹಾರಿಸಿ ಕಾಂಗ್ರೆಸ್ ಮುಖಂಡರೊಬ್ಬರು ವಿವಾದಕ್ಕೆ ಸಿಲುಕಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಕಬ್ಬಳ್ಳಿ ಮಹೇಶ್, ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಬ್ಬಳ್ಳಿ ಮಹೇಶ್ ಈ ಹಿಂದೆ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದರು. ಸದ್ಯ ಅವರ ಈ ವರ್ತನೆ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

