ಒಂಟಿ ದಂತದ ಕಾಡಾನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣು: ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ

Edited By:

Updated on: Mar 15, 2026 | 2:52 PM

ಚಾಮರಾಜನಗರದ ಗಡಿಗ್ರಾಮವಾದ ತಮಿಳುನಾಡಿನ ಅರಳವಾಡಿ ಬಳಿ ಒಂಟಿ ದಂತದ ಕಾಡಾನೆಯ ಹಾವಳಿ ಹೆಚ್ಚಾಗಿದೆ. ಕಬ್ಬಿಣದ ಗೇಟ್ ಮುರಿದು ತೋಟಗಳಿಗೆ ನುಗ್ಗುವ ಈ ಆನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳೆಗಳನ್ನು ನಾಶಪಡಿಸಿ, ಗ್ರಾಮಸ್ಥರಿಗೆ ಆತಂಕ ಸೃಷ್ಟಿಸುತ್ತಿರುವ ಈ ಕಾಡಾನೆ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯದ ಜನರಿಗೂ ತಲೆನೋವಾಗಿ ಪರಿಣಮಿಸಿದೆ.

ಚಾಮರಾಜನಗರ, ಮಾರ್ಚ್​​ 15: ಒಂಟಿ ದಂತದ ಆನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂಟಿ ಸಲಗನ ಏಟಿಗೆ ಕಬ್ಬಿಣದ ಗೇಟ್ ಛಿದ್ರವಾದ ಘಟನೆ ಚಾಮರಾಜನಗರದ ಗಡಿಗ್ರಾಮ ತಮಿಳುನಾಡಿನ ಅರಳವಾಡಿಯಲ್ಲಿ ನಡೆದಿದೆ. ವಾಹನವೊಂದು ಬರುತ್ತಿದ್ದನ್ನು ಕಂಡ ಒಂಟಿದಂತದ ಕಾಡಾನೆ ಸಲೀಸಾಗಿ ಗೇಟ್ ಮುರಿದು ತೋಟಕ್ಕೆ ನುಗ್ಗಿ ಬೆಳೆ ಮೇಯ್ದಿದೆ. ಕಾಡಾನೆ ಗೇಟ್ ಮುರಿದು ಒಳನುಗ್ಗುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಕರ್ನಾಟಕ ಮತ್ತು ತಮಿಳುನಾಡಿನ ಜನರಿಗೆ ಕಾಡಾನೆ ತಲೆನೋವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More