AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಿಗೆ ಹೋಗುವ ದಾರಿ ನನಗೆ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ

ಕಾಡಿಗೆ ಹೋಗುವ ದಾರಿ ನನಗೆ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ

ಸೂರಜ್ ಪ್ರಸಾದ್ ಎಸ್ಎನ್
| Edited By: ವಿವೇಕ ಬಿರಾದಾರ|

Updated on: Sep 20, 2024 | 11:40 AM

Share

ಅರಣ್ಯ ಸಿಬ್ಬಂದಿ ಮೇಲೆಯೇ ಆನೆ ತಿರುಗಿ ಬಿದ್ದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅರಣ್ಯ ಸಿಬ್ಬಂದಿ ಮೇಲೆ ಆನೆ ತಿರುಗಿ ಬಿದ್ದಿರುವ ದೃಶ್ಯ ಪ್ರವಾಸಿಗರ ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮೇಲೆಯೇ ಆನೆ ತಿರುಗಿ ಬದಿದ್ದೆ. ಆನೆ ಕಾಡಿನಿಂದ ನಾಡಿಗೆ ಬರುತ್ತಿತ್ತು. ಈ ವೇಳೆ ಅರಣ್ಯ ಸಿಬ್ಬಂದಿ ಒಂಟಿ ಸಲಗವನ್ನು ಕಾಡಿಗೆ ಹಿಮ್ಮೆಟ್ಟಿಸಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿಯ ಮೇಲೆಯೇ ಆನೆ ತಿರುಗಿ ಬಿದ್ದಿದೆ. ಒಂಟಿ ಸಲಗ ತಿರುಗಿ ಬೀಳುತ್ತಿದ್ದಂತೆ ಅರಣ್ಯ ಸಿಬ್ಬಂದಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಎಲ್ಲ ದೃಶ್ಯ ಪ್ರವಾಸಿಗರ ಮೊಬೈಲ್ ಫೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More