AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಕುಮಾರ್​​ ಮನೆಯಲ್ಲೀಗ ಸೂತಕ!

ಚಾಮರಾಜನಗರ ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಕುಮಾರ್​​ ಮನೆಯಲ್ಲೀಗ ಸೂತಕ!

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 21, 2026 | 11:27 AM

Share

ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ಎನ್​ಕೌಂಟರ್​​ನಲ್ಲಿ ಕುಮಾರ್ ಸಾವನ್ನಪ್ಪಿದ್ದು, ಅವರ ಹೊಸ ಮನೆ ಗೃಹಪ್ರವೇಶದ ಸಂಭ್ರಮ ಶ್ರಾದ್ಧ ಕಾರ್ಯವಾಗಿ ಬದಲಾಗಿದೆ. ಮನೆಯವರು ನಕಲಿ ಎನ್​ಕೌಂಟರ್ ಆರೋಪ ಮಾಡಿದ್ದು, ಮೃತರಾದ ಮೂವರ ಕುಟುಂಬಗಳೂ ನ್ಯಾಯಕ್ಕೆ ಆಗ್ರಹಿಸುತ್ತಿವೆ. ಈ ಪ್ರಕರಣದ ಸತ್ಯಾಸತ್ಯತೆ ಬಹಿರಂಗಪಡಿಸಲು ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದೆ.

ಚಾಮರಾಜನಗರ, ಆಗಸ್ಟ್​​ 21: ಹನೂರು ಬಳಿ ನಡೆದ ಅರಣ್ಯ ಇಲಾಖೆ ಎನ್​ಕೌಂಟರ್​ನಲ್ಲಿ ಕುಮಾರ್, ಆಂಟೋನಿಸ್ವಾಮಿ ಹಾಗೂ ಪೀಟರ್ ಎಂಬ ಮೂವರು ಬಲಿಯಾಗಿದ್ದಾರೆ. ಈ ಪೈಕಿ ಕುಮಾರ್ ಅವರ ಮನೆ ಗೃಹಪ್ರವೇಶ ಇಂದು (ಆಗಸ್ಟ್​​ 21) ನಿಗದಿಯಾಗಿತ್ತು. ಆದರೆ, ಘಟನೆ ನಡೆದ ನಂತರ ಗೃಹಪ್ರವೇಶದ ಬದಲು ಕುಟುಂಬಸ್ಥರು ಶ್ರಾದ್ಧ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಕೇರಳದಲ್ಲಿ ಹಿಟಾಚಿ ಆಪರೇಟರ್ ಆಗಿದ್ದ ಕುಮಾರ್, ಮೂಲತಃ ಚಾಮರಾಜನಗರದವರಾಗಿದ್ದು, ಆಗಾಗ ಊರಿಗೆ ಬರುತ್ತಿದ್ದರು. ಮೃತರ ಕುಟುಂಬಸ್ಥರು ಈ ಎನ್​ಕೌಂಟರ್ ನಕಲಿ ಎಂದು ಆರೋಪಿಸಿದ್ದು, ಅರಣ್ಯ ಅಧಿಕಾರಿಗಳೇ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ದೂರಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಕೊಳ್ಳೇಗಾಲ ಎಸಿ ನೇತೃತ್ವದಲ್ಲಿ ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ನಡೆಯುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

Follow Us
ಸೂರಜ್ ಪ್ರಸಾದ್ ಎಸ್.ಎನ್
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More