ಚಾಮರಾಜನಗರ: 20ಕ್ಕೂ ಅಧಿಕ ಕಾಡಾನೆ ಹಿಂಡು ಜಮೀನಿಗೆ ಲಗ್ಗೆ, ಬೆಚ್ಚಿದ ರೈತರು
ಚಾಮರಾಜನಗರ ಜಿಲ್ಲೆಯ ಕರ್ನಾಟಕ ತಮಿಳುನಾಡು ಗಡಿ ಪ್ರದೇಶ ಎತ್ತಿಗಟ್ಟಿ ಬಳಿ 20ಕ್ಕೂ ಅಧಿಕ ಕಾಡಾನೆ ಹಿಂಡು ಜಮೀನುಗಳಿಗೆ ಲಗ್ಗೆ ಇಟ್ಟಿದೆ. ಈ ಆನೆಗಳು ಗ್ರಾಮಕ್ಕೆ ನುಗ್ಗಿದರೆ ಪ್ರಾಣಪಾಯದ ಭೀತಿ ಎದುರಾಗಿದ್ದು, ಕರ್ನಾಟಕ ಹಾಗೂ ತಮಿಳುನಾಡು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸುವಂತೆ ರೈತರು ಮನವಿ ಮಾಡಿದ್ದಾರೆ. ಮೊಬೈಲ್ ಕ್ಯಾಮರದಲ್ಲಿ ಸೆರೆಯಾದ ಕಾಡಾನೆಗಳ ಹಿಂಡಿನ ವಿಡಿಯೋ ಇಲ್ಲಿದೆ.
ಚಾಮರಾಜನಗರ, ನವೆಂಬರ್ 27: ಕರ್ನಾಟಕ ತಮಿಳುನಾಡು ಗಡಿ ಪ್ರದೇಶವಾದ ಎತ್ತಿಗಟ್ಟಿ ಸಮೀಪ ಬರೋಬ್ಬರಿ 20ಕ್ಕೂ ಅಧಿಕ ಕಾಡಾನೆ ಹಿಂಡು ಜಮೀನುಗಳಿಗೆ ಲಗ್ಗೆ ಇಟ್ಟಿದ್ದು, ಅವುಗಳನ್ನು ನೋಡಿ ರೈತರು ಬೆಚ್ಚಿಬೀಳುವಂತಾಗಿದೆ. ಈ ಆನೆಗಳು ಯಾವಾಗ ಬೇಕಿದ್ದರೂ ಗ್ರಾಮಕ್ಕೆ ನುಗ್ಗುವ ಆತಂಕ ಎದುರಾಗಿದ್ದು, ಕರ್ನಾಟಕ ಹಾಗೂ ತಮಿಳುನಾಡು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆಗೆ ಮನವಿ ಮಾಡಲಾಗಿದೆ. ಒಂದು ವೇಳೆ 20ಕ್ಕೂ ಹೆಚ್ಚು ಕಾಡಾನೆಗಳು ಗ್ರಾಮಕ್ಕೆ ನುಗ್ಗಿದರೆ ಪ್ರಾಣಪಾಯದ ಭೀತಿ ಇದೆ. ಬೈಕ್ ಸವಾರನ ಮೊಬೈಲ್ ಕ್ಯಾಮರದಲ್ಲಿ ಸೆರೆಯಾದ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಇಲ್ಲಿದೆ ನೋಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

